Asianet Suvarna News Asianet Suvarna News

ಸಚಿವ ಶ್ರೀರಾಮುಲುಗೂ ಕೊರೋನಾ: ಸರ್ಕಾರಿ ಸ್ವಾಮ್ಯದ ಆಸ್ಪತ್ರೆಗೆ ದಾಖಲು

ಈಗಾಗಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ವಕ್ಕರಿಸಿರುವ ಮಹಾಮಾರಿ ಕೊರೋನಾ, ಇದೀಗ ಆರೋಗ್ಯ ಸಚಿವರಿಗೆ ತಗುಲಿದೆ.

Karnataka Health Minister B Sriramulu tweets that he has tested positive for COVID19
Author
Bengaluru, First Published Aug 9, 2020, 6:05 PM IST

ಬೆಂಗಳೂರು, (ಆ.09):  ರಾಜ್ಯ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಅವರೇ  ಇಂದು (ಭಾನುವಾರ) ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ.

ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್  ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ರೈತರಿಗೆ ಮೋದಿ ಆಫರ್, ಕನ್ನಡದಲ್ಲಿ ವಿದ್ಯಾ ಬಾಲನ್ ಆನ್ಸರ್: ಆ.9ರ ಟಾಪ್ 10 ಸುದ್ದಿ!

ಈ ಕುರಿತಂತೆ ಟ್ವಿಟ್ ಮಾಡಿರುವ ಶ್ರೀರಾಮುಲು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.  ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.

ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios