ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣೆ ಆಯೋಗಕ್ಕೆ ಮಹತ್ವದ ಸೂಚನೆ ಕೊಟ್ಟಿದೆ.

ಬೆಂಗಳೂರು, (ನ.13): ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯವು ಅನುಮತಿ ನೀಡಿದ್ದು, 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ

ಇದನ್ನ ವಿಚಾರಣೆ ನಡೆಸಿದ ಹೈಕೋರ್ಟ್, ಎಲೆಕ್ಷನ್ ಘೋಷಣೆ ಬಗ್ಗೆ 3 ವಾರದಲ್ಲಿ ಆಯೋಗ ತೀರ್ಮಾನಿಸಬೇಕು. ಆಯೋಗ ಸರ್ಕಾರ,‌ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬಹುದು. ಚುನಾವಣೆಗೆ ಹಣಕಾಸಿನ ಅಗತ್ಯವಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ,

ಅಸಾಧಾರಣ ಸಂದರ್ಭದಲ್ಲಷ್ಟೇ ಚುನಾವಣೆ ಮುಂದೂಡಬಹುದು. ಆ ಅಸಾಧಾರಣ ಸಂದರ್ಭವನ್ನು ಆಯೋಗ ತೀರ್ಮಾನಿಸಬೇಕು. ಚುನಾವಣೆ ಮುಂದೂಡಿಕೆ ಸರ್ಕಾರ ನಿರ್ಧರಿಸುವಂತಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಅಶೋಕ್ ಎಸ್. ಕಿಣಗಿರವರಿದ್ದ ಪೀಠ ಸ್ಪಷ್ಟಪಡಿಸಿದೆ.