Asianet Suvarna News Asianet Suvarna News

ಪ್ರಜ್ವಲ್‌ ಬಳಿಕ ಈಗ ರೇವಣ್ಣ ವಿರುದ್ಧವೂ ಅನರ್ಹತೆ ಅರ್ಜಿ: ಸಮನ್ಸ್‌ ಜಾರಿಗೆ ಆದೇಶ

ಚುನಾವಣೆ ವೇಳೆ ಹಲವು ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದಿಂದ ಎಚ್‌.ಡಿ.ರೇವಣ್ಣ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. 

Karnataka High Court Summons Issued To Mla HD Revanna gvd
Author
First Published Sep 5, 2023, 4:23 AM IST

ಬೆಂಗಳೂರು (ಸೆ.05): ಚುನಾವಣೆ ವೇಳೆ ಹಲವು ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದಿಂದ ಎಚ್‌.ಡಿ.ರೇವಣ್ಣ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ. ಹೊಳೆನರಸೀಪುರ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಆದ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ, ರೇವಣ್ಣ ಅವರಿಗೆ ಸಮನ್ಸ್‌ ಮರು ಜಾರಿಗೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿ ಸಂಬಂಧ ಈ ಹಿಂದೆ ಹೈಕೋರ್ಟ್‌ ಜಾರಿಗೊಳಿಸಿರುವ ಸಮನ್ಸ್‌ ಅನ್ನು ಎಚ್‌.ಡಿ. ರೇವಣ್ಣ ಸ್ವೀಕರಿಸಿರಲಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ವಿಧಾನಸಭೆ ಕಾರ್ಯದರ್ಶಿಗಳ ಮೂಲಕ ಮತ್ತೊಂದು ಬಾರಿ ಸಮನ್ಸ್‌ ಜಾರಿಗೊಳಿಸಲು ನಿರ್ದೇಶಿಸಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

ಕಾವೇರಿ ನೀರನ್ನು ನೀಡದಂತೆ ಡಿಕೆಶಿ ಅಧಿಕಾರಿಗಳ ಬಾಯಿ ಮುಚ್ಚಿಸಿದ್ದಾರೆ: ದೇವೇಗೌಡ ಆರೋಪ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್‌.ಡಿ. ರೇವಣ್ಣ ಭಾರಿ ಅಕ್ರಮ ಎಸಗಿ ಜಯ ಗಳಿಸಿದ್ದಾರೆ. ರೇವಣ್ಣ ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ 2 ಕೋಳಿಗಳು ಮತ್ತು 2000 ರು. ನಗದು ಹಂಚಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ಆಮಿಷ ಒಡ್ಡುತ್ತಿದ್ದನ್ನು ತಡೆಯಲು ಹೋದಾಗ ರೇವಣ್ಣ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಬಿ.ಎಲ್‌.ಸಂತೋಷ್‌ 4 ಶಾಸಕರನ್ನು ಕರೆಸಿಕೊಳ್ಳಲಿ ನೋಡೋಣ: ಸಚಿವ ಶಿವರಾಜ ತಂಗಡಗಿ

ಅಲ್ಲದೆ, ರೇವಣ್ಣ ಅವರ ನಾಮಪತ್ರವೇ ದೋಷಪೂರಿತವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿಲ್ಲ. ಹಲವು ಸತ್ಯಾಂಶ ಮರೆ ಮಾಚಿದ್ದಾರೆ. ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳ ಬಗ್ಗೆಯೂ ಸುಳ್ಳು ಮಾಹಿತಿ ನೀಡಲಾಗಿದೆ. ಹೀಗಿದ್ದರೂ ರೇವಣ್ಣ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಅನುಮೋದಿಸಿದ್ದಾರೆ. ಆದ್ದರಿಂದ ಅವರ ಆಯ್ಕೆ ಅಸಿಂಧುಗೊಳಿಸಬೇಕು. ತಮ್ಮನ್ನು ಜಯಶಾಲಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Follow Us:
Download App:
  • android
  • ios