ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಹುಬ್ಬಳ್ಳಿ ಧಾರವಾಡ ಕಲಬುರಗಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮೂರು ಪಾಲಿಕೆಗಳ 195 ವಾರ್ಡ್‌ಗಳಿಗೆ ಸೆ.3ರಂದು ನಡೆದ ಚುನಾವಣೆಯಲ್ಲಿ ಶೇ.51 ರಷ್ಟು ಮತದಾನ ನಡೆದಿತ್ತು ಒಟ್ಟು 1110 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ಬಹಿರಂಗವಾಗಲಿದೆ.
ಬೆಂಗಳೂರು (ಸೆ.06): ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ಹುಬ್ಬಳ್ಳಿ ಧಾರವಾಡ ಕಲಬುರಗಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಇಂದು ನಡೆಯಲಿದೆ.

ಮೂರು ಪಾಲಿಕೆಗಳ 195 ವಾರ್ಡ್‌ಗಳಿಗೆ ಸೆ.3ರಂದು ನಡೆದ ಚುನಾವಣೆಯಲ್ಲಿ ಶೇ.51 ರಷ್ಟು ಮತದಾನ ನಡೆದಿತ್ತು. ಒಟ್ಟು 1110 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ಬಹಿರಂಗವಾಗಲಿದೆ.
ಕುತೂಹಲದ ಫಲಿತಾಂಶ : ಯಾರಪಾಲಿಗೆ ಬೆಳಗಾವಿ ಗದ್ದುಗೆ?
ಮತ ಎಣಿಕೆ ಕೇಂದ್ರದ ಕೊಟಡಿಗಳನ್ನು ಸ್ಯಾನಿಟಯಸ್ ಮಾಡಲಾಗಿದ್ದು, ಕೇಂದ್ರಕ್ಕೆ ಅಗಮಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗು ರಾಜಕಿಯ ಪಕ್ಷದವರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. ಮತ ಎಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಹ್ಯಾಂಡ್ ಗ್ಲೌಸ್ ಫೇಸ್ ಶೀಲ್ಡ್ ಮಾಸ್ಕ್ , ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಲಾಗಿದೆ.
