ಸೋಲಿನ ಕಹಿ ಮರೆತು ಲೋಕ ಚುನಾವಣೆಗೆ ಸಜ್ಜಾದ ನಿಖಿಲ್‌ ಕುಮಾರಸ್ವಾಮಿ: ಅಖಿಲೇಶ್‌ ಯಾದವ್‌ ಭೇಟಿ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ.

Karnataka JDS leader Nikhil Kumaraswamy meets Uttar Pradesh former CM Akhilesh Yadav sat

ಬೆಂಗಳೂರು (ಜೂ.15): ಲೋಕಸಭಾ ಚುನಾವನೆಗೆ ಇನ್ನೂ ಒಂದು ವರ್ಷ ಬಾಕಿ ಇರುವ ಮುಂಚೆಯೇ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿ ರಾಜಕೀಯ ಕುರಿತ ಚರ್ಚೆ ಮಾಡಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಮೊಮ್ಮಗ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮಗನಾಗಿದ್ದರೂ ನಿಖಿಲ್‌ ಕುಮಾರಸ್ವಾಮಿಗೆ ಕರ್ನಾಟಕದಲ್ಲಿ ಈವರೆಗೂ ರಾಜಕೀಯ ನೆಲೆ ಸಿಕ್ಕಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇನ್ನು ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಂದೆಯ ಕ್ಷೇತ್ರವಾದ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರೂ ಸೋಲು ಅನುಭವಿಸಿದ್ದರು. 

ಪ್ರತಿನಿತ್ಯ ಪ್ರಾರ್ಥನೆಯಲ್ಲಿ ಸಂವಿಧಾನ ಪೀಠಿಕೆ ಓದುವುದನ್ನೂ ಕಡ್ಡಾಯಗೊಳಿಸಿದ ಸರ್ಕಾರ

ರಾಜಕೀಯ ನೆಲೆ ಕಂಡುಕೊಳ್ಳಲು ಹೋರಾಟ: ರಾಜ್ಯದಲ್ಲಿ ಸತತ ಸೋಲಿನ ಕಹಿಯನ್ನು ಅನುಭವಿಸಿದರೂ ರಾಜಕೀಯ ನೆಲೆ ಕಂಡುಕೊಳ್ಳಲು ಹೋರಾಟ ಮುಂದುವರೆಸಿರುವ ನಿಖಿಲ್‌ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಮೊದಲೇ ರಾಜಕೀಯ ಕಾರ್ಯಗಳನ್ನು ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಯಾವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಅಖಿಲೇಶ್‌ ಭೇಟಿ ಉದ್ದೇಶವೇನು? : 
ಈ ಕುರಿತು ಸ್ವತಃ ಮಾಹಿತಿ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, "ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ Samajwadi Party ವರಿಷ್ಠ ನಾಯಕರೂ ಆಗಿರುವ ಶ್ರೀ Akhilesh Yadav ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು. ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು" ಎಂದು ಹೇಳಿದ್ದಾರೆ.

ರಾಜಕೀಯ ಬೆಳವಣಿಗೆ ಕುರಿತ ಚರ್ಚೆ:  ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡ ಸಾಹೇಬರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಯಾದವ್‌ ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಹಂಚಿಕೊಂಡರು.

ಕರೆಂಟ್‌ ಬಿಲ್‌ ಕೊಡಿ ಅಂದ್ರೆ, ಮನೆಯನ್ನೇ ಕಟ್ಟೋವಷ್ಟು ಬಿಲ್‌ ಕೊಟ್ಟ ಮೆಸ್ಕಾಂ! ಗಾಬರಿಗೊಂಡ ಮಾಲೀಕ

ಕರ್ನಾಟಕದಲ್ಲಿ ಅಭ್ಯಾಸ ಮಾಡಿದ್ದ ಅಖಿಲೇಶ್‌ ಯಾದವ್:  ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios