ಹಾಸನ, (ಜುಲೈ.14): ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿಯವರ ಪತ್ನಿ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮತ್ತು ಅವರ ಪುತ್ರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ

ಕಳೆದ ವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ, ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವ ತೆಗೆದು‌ ಹಾಸನದ ಟೆಸ್ಟಿಂಗ್ ಕೇಂದ್ರಕ್ಕೆ ರವಾನಿಸಲಾಗಿತ್ತು. ಸೋಮವಾರ ಕೊರೋನಾ ಟೆಸ್ಟ್‌ ರಿಪೋರ್ಟ್‌ ಬಂದಿದೆ.

ಕೊರೋನಾ ಗೆದ್ದ JDS ಶಾಸಕ ಬೋಜೇಗೌಡ 

 ಬೆಳಗೋಡು ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮತ್ತು ಅವರ ಮಗಳಿಗೂ ಕೊರೋನಾ ಸೋಂಕಿರುವುದು ದೃಢಪಟ್ಟಿದೆ.  ಅಲ್ಲದೆ, ಕಾರಿನ ಡ್ರೈವರ್‌ಗೂ ಪಾಸಿಟಿವ್ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಎಚ್.ಕೆ ಕುಮಾರಸ್ವಾಮಿ, ಮೊದಲ ವರದಿಯಲ್ಲಿ ನನಗೆ ಪಾಸಿಟಿವ್ ಕಂಡು ಬಂದಿಲ್ಲ .ಮುನ್ನೆಚ್ಚರಿಕೆಯಾಗಿ ಬೇರೆ ಮನೆಗೆ ಸ್ಥಳಂತರವಾಗಿದ್ದೇನೆ. ಒಂದು ವಾರಗಳ ಕಾಲ ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು ಹೋಂ ಕ್ವಾರಂಟೈನ್ ನಲ್ಲಿ ಇರಲು ನಿರ್ಧರಿಸಿದ್ದೇನೆ. ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅಗತ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ.

ಇನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತ ಸಹಾಯಕನಿಗೆ ಕೊರೋನಾ ಅಟ್ಯಾಕ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.