ಸೋಲುವ ಭೀತಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಂತೆ ಕಂತೆ ಹಣ ಹಂಚಿಕೆ!

ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿರುವ ಹಿನ್ನೆಲೆ ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸೇರುವ ಕಿತ್ತೂರು- ಖಾನಾಪುರ ಭಾಗದಲ್ಲಿ ಮತದಾರರಿಗೆ ಕಾಂಗ್ರೆಸ್ ಭರ್ಜರಿಯಾಗಿ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

Karnataka-lok-sabha-election-2024-phase-2-live-updates Money distribution to voters by uttara kannada congress candidate rav

ಕಾರವಾರ, ಉತ್ತರಕನ್ನಡ (ಮೇ.6):  ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿರುವ ಹಿನ್ನೆಲೆ ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸೇರುವ ಕಿತ್ತೂರು- ಖಾನಾಪುರ ಭಾಗದಲ್ಲಿ ಮತದಾರರಿಗೆ ಕಾಂಗ್ರೆಸ್ ಭರ್ಜರಿಯಾಗಿ ಹಣ ಹಂಚಿಕೆ ಮಾಡುತ್ತಿದೆ. ಹಳ್ಳಿ ಹಳ್ಳಿಗೆ ತೆರಳಿ ಕಾರ್ಯಕರ್ತರು ಬಹಿರಂಗವಾಗಿ ಹಣ ನೀಡುತ್ತಿದ್ದಾರೆ. ಕಿತ್ತೂರಿನಲ್ಲಿ ಹಣ ಹಂಚುತ್ತಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಕಾಂಗ್ರೆಸ್ ಕರಪತ್ರದೊಂದಿಗೆ ಹಳ್ಳಿಯ ಮಹಿಳೆಯರು, ಯುವಕರಿಗೆ ತಲಾ 500 ರೂ. ವಿತರಣೆ ಮಾಡುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೋಲಿನ ಭೀತಿಯಿಂದ ವ್ಯಾಪಕವಾಗಿ ಹಣ ಹಂಚುತ್ತಿದೆ ಎಂದು ಟೀಕಿಸಿದ್ದಾರೆ.

'ಯತ್ನಾಳ್ ಎಂದರೆ ಕಾಮಿಡಿ ಮುತ್ಯಾ, ಹುಚ್ಚು ಮುತ್ಯಾ, ಪಾಗಲ್ ಮುತ್ಯಾ..' ವಚನಾನಂದಶ್ರೀ ವ್ಯಂಗ್ಯ 


ಗ್ಯಾರಂಟಿ ಯೋಜನೆ ಬಿಟ್ಟರೆ ಕಾಂಗ್ರೆಸ್ ನವರಿಗೆ ಪ್ರಚಾರಕ್ಕೆ ಬೇರೆ ಯಾವುದೇ ಸರಕು ಇಲ್ಲ. ಕಾಂಗ್ರೆಸ್ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದೆ. ಅಧಿಕಾರಿಗಳು ಒತ್ತಡಕ್ಕೆ ಮಣಿಯದೇ  ಇದಕ್ಕೆ ಕಡಿವಾಣ ಹಾಕಬೇಕು. ಕಿತ್ತೂರ ಶಾಸಕರು, ಬೆಂಬಲಿಗ ಕಾರ್ಯಕರ್ತರಿಂದಲೇ ಗ್ಯಾರಂಟಿ ಕಾರ್ಡ್ ಜತೆ ಹಣ ಹಂಚಲಾಗ್ತಿದೆ. ಇಷ್ಟೆಲ್ಲ ಚುನಾವಣಾ ಅಕ್ರಮ ನಡೆದರೂ ಚುನಾವಣಾಧಿಕಾರಿಗಳು, ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನಕ್ಕಾಗಿ ಉಭಯ ಪಕ್ಷಗಳು ಅಬ್ಬರ ಪ್ರಚಾರಕ್ಕೆಕ ಭಾನುವಾರವೇ ತೆರೆಬಿದ್ದಿದೆ. ಹೀಗಾಗಿ ಇಂದು ಮನೆ ಮನೆಗೆ ಹೋಗಿ ಮತದಾರರಿಗೆ ಮತಯಾಚನೆ ಮಾಡುತ್ತಿರುವ ಅಭ್ಯರ್ಥಿಗಳು. 

'ಯತ್ನಾಳ್ ಎಂದರೆ ಕಾಮಿಡಿ ಮುತ್ಯಾ, ಹುಚ್ಚು ಮುತ್ಯಾ, ಪಾಗಲ್ ಮುತ್ಯಾ..' ವಚನಾನಂದಶ್ರೀ ವ್ಯಂಗ್ಯ

ಎಲ್ಲೆಲ್ಲಿ ಮತದಾನ?

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ ಮೀಸಲು), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಇನ್ನು ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ನಾಳೆಯೇ ಚುನಾವಣೆ ನಡೆಯಲಿದೆ. ಬಿಜೆಪಿ ಕಾಂಗ್ರೆಸ್ ಸೇರಿ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ.

Latest Videos
Follow Us:
Download App:
  • android
  • ios