ತಂದೆ ಬೆನ್ನಲ್ಲೇ ಸಚಿವ ಸುಧಾಕರ್ ಹೆಂಡತಿ, ಮಗಳಿಗೆ ಕೊರೋನಾ ಸೋಂಕು ದೃಢ!
ತಂದೆ ಬೆನ್ನಲ್ಲೇ ಸಚಿವ ಡಾ. ಸುಧಾಕರ್ ಕುಟುಂಬಕ್ಕೆ ಮತ್ತೊಂದು ಶಾಕ್| ಹೆಂಡತಿ, ಮಗಳಿಗೂ ಕೊರೋನಾ ಸೋಂಕು ದೃಢ| ಮಾಹಿತಿಯನ್ನು ಖಚಿತಪಡಿಸಿದ ಸಚಿವ ಸುಧಾಕರ್|
ಬೆಂಗಳೂರು(ಜೂ.23): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆ ಹಾಗೂ ಅಡುಗೆ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮಾಹಿತಿಯನ್ನು ಖುದ್ದು ಸಚಿವರೇ ಸೋಮವಾರ ಟ್ವೀಟ್ ಮಾಡಿ ಖಚಿತಪಡಿಸಿದ್ದರು. ಆದರೀಗ ಇದರ ಬೆನ್ನಲ್ಲೇ ಸುಧಾಕರ್ ಹೆಂಡತಿ ಹಾಗೂ ಮಗಳಿಗೂ ಕೊರೋನಾ ಸೋಂಕಿರುವುದು ದೃಢವಾಗಿದೆ.
ಸಚಿವ ಸುಧಾಕರ್ ತಂದೆಗೆ ಕೊರೋನಾ ಸೋಂಕು ದೃಢ..!
ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟ ಬೆನ್ನಲ್ಲೇ ಕುಟುಂಬದ ಎಲ್ಲಾ ಸದಸ್ಯರ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಈ ವರದಿ ಬಂದಿದ್ದು, ಸಚಿವರ ಹೆಂಡತಿ ಹಾಗೂ ಮಗಳಿಗೆ ಸೋಂಕು ಇರುವುದು ದೃಢವಾಗಿದೆ. ಆದರೆ ಸಚಿವರು ಹಾಗೂ ಇಬ್ಬರು ಗಂಡು ಮಕ್ಕಳಿಗೆ ಕೊರೋನಾ ನೆಗೆಟಿವ್ ಎಂದು ವರದಿ ತಿಳಿಸಿದೆ. ಇಂದು ಮಂಗಳವಾರ ಬೆಳಗ್ಗೆ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಡಾ. ಸುಧಾಕರ್ 'ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ' ಎಂದಿದ್ದಾರೆ.
ಅಡುಗೆ ಭಟ್ಟ, ತಂದೆ ಬೆನ್ನಲ್ಲೇ ಇದೀಗ ಸಚಿವ ಸುಧಾಕರ್ ಮನೆ ಸಹಾಯಕರಿಗೂ ಕೊರೋನಾ ಪಾಸಿಟಿವ್
ಅಡುಗೆ ಸಿಬ್ಬಂದಿ ಮತ್ತು ತಂದೆಗೆ ಕೊರೋನಾ
ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಲಕ್ಷಣಗಳಾದ ಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿದ್ದವು. ಈ ಹಿನ್ನಲೆ 82 ವರ್ಷದ ಸುಧಾಕರ್ ತಂದೆಗೆ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆಗೂ ಒಳಪಡಿಸಲಾಗಿತ್ತು. ವರದಿಯಲ್ಲಿ ಸೋಂಕು ಇರುವುದು ದೃಢವಾಗಿತ್ತು.
"