ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್ ಅಹಮ್ಮದ್, ಕಾಂಗ್ರೆಸ್‌ನಲ್ಲಿ ಹೊಸ ತಲೆನೋವು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಮುಂದೆ ಜಮೀರ್ ಅಹಮ್ಮದ್ ಬಾಂಬ್ ಸಿಡಿಸಿದ್ದಾರೆ. ಇದು ಕೋಲಾಹಲಕ್ಕೆ ಕಾರಣವಾಗಿದೆ. 

ಬೆಂಗಳೂರು (ಮಾ.21) ರಾಜ್ಯ ಕಾಂಗ್ರೆಸ್‌ನಲ್ಲಿ ಇಂದು ಸಿಡಿಸಿದ ಹೊಸ ಬಾಂಬ್ ಕೋಲಾಹಲ ಸೃಷ್ಟಿಸಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಿಚವ ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ದಾವಣೆಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಘೋಷಣೆ ವಿಚಾರವಾಗಿ ನಡೆದ ಸಭೆಯಲ್ಲಿ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಜಮೀರ್ ಅಹಮ್ಮದ್ ಬಾಂಬ್ ಸಿಡಿಸಲು ಕಾರಣವೇನು?

ಕರ್ನಾಟಕದ ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಕುರಿತು ಕಾಂಗ್ರೆಸ್ ಸತತ ಸಭೆ ನಡೆಸುತ್ತಿದೆ. ಟಿಕೆಟ್ ಘೋಷಣೆ ವಿಚಾರವಾಗಿ ತೀವ್ರ ಗೊಂದಲ, ಜಟಾಪಟಿ ಏರ್ಪಟ್ಟಿದೆ. ಹೀಗಾಗಿ ನಿನ್ನೆ ರಾತ್ರಿಯಿಂದ ರಾಜ್ಯ ನಾಯಕರ ಜೊತೆ ಸಭೆ ನಡೆಸುತ್ತಿರುವ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ನಾಯಕರು ವಿವಿದ ಭೇಡಿಕೆ ಮುಂದಿಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಮ್ ನಾಯಕರಿಗೆ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಲು ಮೌಲ್ವಿಗಳು,ಮುಸ್ಲಿಂ ಪ್ರಮುಖರು ಆಗ್ರಹಿಸಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹಮ್ಮದ್ ಹೇಳಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ.

ಜಮೀರ್ ಬೇಡಿಕೆ ತಳ್ಳಿ ಹಾಕಿದ ಸುರ್ಜೆವಾಲ

ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸುತ್ತಿದ್ದಂತೆ ರಣದೀಪ್ ಸಿಂಗ್ ಸುರ್ಜೆವಾಲ ಉತ್ತರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಂದು ಸಮದಾಯ ನೆಚ್ಚಿಕೊಂಡಿಲ್ಲ. ಎಲ್ಲಾ ಸಮುದಾಯ ನಮ್ಮ ಜೊತೆಗಿದೆ. ಟಿಕೆಟ್ ಸೂಕ್ತ ಅಭ್ಯರ್ಥಿಗೆ ನೀಡಲಾಗುತ್ತದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.ಈ ಮೂಲಕ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಹೈಕಮಾಂಡ್ ಮುಂದೆ ಠುಸ್ ಆಗಿದೆ.

ಶಾಮನೂರ ಸಮರ್ಥ್ ನಡೆಗೆ ಭಾರಿ ಆಕ್ರೋಶ

ಎಲೆಕ್ಷನ್ ಉಸ್ತುವಾರಿ ಸಭೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಈಗಾಗಲೇ ನಾಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ, ಬಿ ಫಾರಂ ಹಂಚಿಕೆ ಮಾಡಿಲ್ಲ. ಇದಕ್ಕೂ ಮೊದಲೇ ಶಾಮನೂರು ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಮುಸ್ಲಿಂ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸುರ್ಜೆವಾಲ ಕೂಡ ಅಸಮಧಾನ ವ್ಯಕ್ತಪಡಿಸಿದ್ದಾರೆ.