Asianet Suvarna News Asianet Suvarna News

ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ: ರಘುಪತಿ ಭಟ್!

 ಹಿಂದೆ ಪಕ್ಷದ ನಾಯಕರನ್ನು ಟೀಕೆ ಮಾಡಿದ್ದ ಜಗದೀಶ್ ಶೆಟ್ಟರ್ ಒಂದೇ ವರ್ಷದಲ್ಲಿ ಪಕ್ಷಕ್ಕೆ ವಾಪಾಸಾಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಆದರೆ ನಾನು ಪಕ್ಷದ ಯಾವ ನಾಯಕರನ್ನು ಬೈದಿಲ್ಲ, ಪಕ್ಷದ ವ್ಯವಸ್ಥೆಯ ವಿರುದ್ಧ ಮಾತನಾಡಿದ್ದೇನೆ. ಹೀಗಾಗಿ ನನ್ನ ವಜಾ ಕೂಡ ಶಾಶ್ವತ ಅಲ್ಲ ಎಂದು ಬಿಜೆಪಿಯಿಂದ  ಉಚ್ಛಾಟನೆಗೊಂಡಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದರು

Karnataka MLC Election 2024 BJP expels its former Udupi MLA Raghupathi Bhat statment at udupi today rav
Author
First Published May 26, 2024, 4:26 PM IST

ಉಡುಪಿ (ಮೇ.26): ಹಿಂದೆ ಪಕ್ಷದ ನಾಯಕರನ್ನು ಟೀಕೆ ಮಾಡಿದ್ದ ಜಗದೀಶ್ ಶೆಟ್ಟರ್ ಒಂದೇ ವರ್ಷದಲ್ಲಿ ಪಕ್ಷಕ್ಕೆ ವಾಪಾಸಾಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಆದರೆ ನಾನು ಪಕ್ಷದ ಯಾವ ನಾಯಕರನ್ನು ಬೈದಿಲ್ಲ, ಪಕ್ಷದ ವ್ಯವಸ್ಥೆಯ ವಿರುದ್ಧ ಮಾತನಾಡಿದ್ದೇನೆ. ಹೀಗಾಗಿ ನನ್ನ ವಜಾ ಕೂಡ ಶಾಶ್ವತ ಅಲ್ಲ. ಈ ವಿಚಾರದಲ್ಲಿ  ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ ಎಂದು ಬಂಡಾಯ ಸ್ಪರ್ಧೆಗಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದರು.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಪಕ್ಷದಿಂದ ಉಚ್ಛಾಟನೆಯಾದದ್ದು ಕೂಡ ನನಗೆ ಗೊತ್ತಿರಲಿಲ್ಲ. ಮಾಧ್ಯಮದ ಮೂಲಕ ತಿಳಿಯಿತು, ಆದರೆ ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ ಎಂದರು.

 

Breaking: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ ಉಚ್ಛಾಟನೆ

ಪಕ್ಷದಿಂದ ಉಚ್ಛಾಟನೆಯಾಗಿದ್ದಕ್ಕೆ ನಾನು ವಿಚಲಿತನಾಗಿಲ್ಲ. ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ, ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನ ಶಿವಮೊಗ್ಗದಲ್ಲಿ ಬೆಂಗಳೂರಿನಲ್ಲಿ ಬಾಗಲಕೋಟೆ ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ? ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದರು.

Latest Videos
Follow Us:
Download App:
  • android
  • ios