ಕರ್ನಾಟಕ ಮಾಡೆಲ್‌ ಇಡೀ ದೇಶಕ್ಕೆ ಮಾದರಿಯಾಗಿದೆ: ಡಿ.ಕೆ.ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ ಎಂದು ಮಹಾರಾಷ್ಟ್ರದಲ್ಲಿ ಆಡಳಿತರೂಢ ಪಕ್ಷಗಳು ಸುಳ್ಳು ಹೇಳುತ್ತಿವೆ. ಅಲ್ಲಿನ ಮಹಾಯತಿ ಸರ್ಕಾರದ ಬಿಜೆಪಿ, ಶಿವಸೇನಾ, ಎನ್‌ಸಿಪಿ ಎಂಎಲ್‌ಎಗಳಿಗೆ ಕರ್ನಾಟಕಕ್ಕೆ ಭೇಟಿ ನೀಡಲು ಬಸ್ ಅಥವಾ ವಿಶೇಷ ವಿಮಾನ ವ್ಯವಸ್ಥೆ ಮಾಡುತ್ತೇನೆ. ಅವರು ಇಲ್ಲಿಗೆ ನೇರವಾಗಿ ಬಂದು ಜನರನ್ನು ಕೇಳಬಹುದು. ಜತೆಗೆ ಬಿಜೆಪಿ ಕಾರ್ಯಕರ್ತರ ಬಳಿಯೂ ಅಭಿಪ್ರಾಯ ತಿಳಿದುಕೊಳ್ಳಬಹುದು ಎಂದು ಸವಾಲು ಹಾಕಿದ ಡಿಸಿಎಂ ಡಿ.ಕೆ.ಶಿವಕುಮಾರ್ 

Karnataka model is a model for the entire country Says DCM DK Shivakumar grg

ಹಾವೇರಿ(ಶಿಗ್ಗಾಂವಿ)(ನ.08):  ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ ಸುಳ್ಳು ಜಾಹೀರಾತು ನೀಡುತ್ತಿವೆ. ಮಹಾಯತಿ ನಾಯಕರೆಲ್ಲ ಸುಳ್ಳುಗಾರರು. ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿಯಾಗಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. 

ಶಿಗ್ಗಾಂವಿ ಕ್ಷೇತ್ರದ ದುಂಡಶಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿಲ್ಲ ಎಂದು ಮಹಾರಾಷ್ಟ್ರದಲ್ಲಿ ಆಡಳಿತರೂಢ ಪಕ್ಷಗಳು ಸುಳ್ಳು ಹೇಳುತ್ತಿವೆ. ಅಲ್ಲಿನ ಮಹಾಯತಿ ಸರ್ಕಾರದ ಬಿಜೆಪಿ, ಶಿವಸೇನಾ, ಎನ್‌ಸಿಪಿ ಎಂಎಲ್‌ಎಗಳಿಗೆ ಕರ್ನಾಟಕಕ್ಕೆ ಭೇಟಿ ನೀಡಲು ಬಸ್ ಅಥವಾ ವಿಶೇಷ ವಿಮಾನ ವ್ಯವಸ್ಥೆ ಮಾಡುತ್ತೇನೆ. ಅವರು ಇಲ್ಲಿಗೆ ನೇರವಾಗಿ ಬಂದು ಜನರನ್ನು ಕೇಳಬಹುದು. ಜತೆಗೆ ಬಿಜೆಪಿ ಕಾರ್ಯಕರ್ತರ ಬಳಿಯೂ ಅಭಿಪ್ರಾಯ ತಿಳಿದುಕೊಳ್ಳಬಹುದು ಎಂದು ಸವಾಲು ಹಾಕಿದರು.

ವಕ್ಫ್‌ ಆಸ್ತಿಯಲ್ಲಿ ರೈತರು, ಹಿಂದೂಗಳಿಗೆ ಅನ್ಯಾಯ ಆಗ್ತಿದೆ, ಇದನ್ನೂ ಮಾತನಾಡಬಾರದಾ?: ಪ್ರತಾಪ್ ಸಿಂಹ ಗರಂ

ಮಹಾರಾಷ್ಟ್ರದಲ್ಲಿ ಗ್ಯಾರಂಟಿಗಳ ಬಗ್ಗೆ ಬಿಜೆಪಿ, ಶಿವಸೇನೆ ಸುಳ್ಳು ಹೇಳ್ತಿದೆ

೧.೨೯ ಕೋಟಿ ಮಹಿಳೆಯರ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಹಣ ₹೨ ಸಾವಿರ ಬರುತ್ತಿದೆ. ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು ₹೫೦-೫೨ ಸಾವಿರ ಕೋಟಿ ಹಣ ಗ್ಯಾರಂಟಿಗಳಿಗೆ ಎಂದು ಮೀಸಲಿಡಲಾಗಿದೆ ಎಂದರು.

ಸಿದ್ದರಾಮಯ್ಯ ರಾಜೀನಾಮೆ ಫಿಕ್ಸಾಗಿದೆ, ಹುಡುಗಾಟಕ್ಕೆ ಹೇಳ್ತಿಲ್ಲ: ಬಿ.ವೈ.ವಿಜಯೇಂದ್ರ

ಚನ್ನಪಟ್ಟಣದ ಚುನಾವಣಾ ಪ್ರಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡರ ಇಬ್ಬಗೆ ನೀತಿ ಬಗ್ಗೆ ಹೇಳಿದ್ದಾರೆ. ಒಬ್ಬ ಮೊಮ್ಮಗ ಏನೋ ಮಾಡಿದಾಗ ಕಣ್ಣಲ್ಲಿ ನೀರು ಬರಲಿಲ್ಲ. ಆದರೆ ಈಗ? ದೊಡ್ಡವರಾದ ಕಾರಣ ಅವರ ಬಗ್ಗೆ ಚರ್ಚೆ ಮಾಡಲು ಹೋಗುವುದಿಲ್ಲ. ದೇವೇಗೌಡರು ಈ ನಾಡಿನ ಹಿರಿಯ ರಾಜಕಾರಣಿ. ಅವರ ಬಗ್ಗೆ ಅಪಾರವಾದ ಗೌರವವಿದೆ. ನಾನೇನಾದರೂ ಲೂಟಿ ಮಾಡಿದ್ದರೆ ನನ್ನ ಕ್ಷೇತ್ರದ ಜನ ೧.೨೩ ಲಕ್ಷ ಮತಗಳ ಅಂತರದಿಂದ ೮ ಬಾರಿ ನನ್ನ ಆಯ್ಕೆ ಮಾಡುತ್ತಿದ್ದಾರಾ? ದೇವೇಗೌಡರ ಸುಪುತ್ರ ಕುಮಾರಸ್ವಾಮಿ ವಿರುದ್ಧವೂ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನ ಕ್ಷೇತ್ರದ ಜನ ನನಗೆ ದೇವರಿದ್ದಂತೆ. ಅವರ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.

ಬೊಮ್ಮಾಯಿ, ಸೋಮಣ್ಣ ಸಮಿತಿ ಸದಸ್ಯರೇ?: 

ವಕ್ಫ್ ವಿಚಾರವಾಗಿ ಜೆಪಿಸಿ (ಜಂಟಿ ಪಾರ್ಲಿಮೆಂಟ್ ಸಮಿತಿ) ರಾಜ್ಯಕ್ಕೆ ಭೇಟಿ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಂಟಿ ಪಾರ್ಲಿಮೆಂಟ್ ಸಮಿತಿ ಎನ್ನುವುದು ಇಲ್ಲ. ಕೇವಲ ಬಿಜೆಪಿಯ ನಾಯಕರು ಭೇಟಿ ಕೊಟ್ಟಿದ್ದಾರೆ. ಬೊಮ್ಮಾಯಿ, ಸೋಮಣ್ಣ ಆ ಸಮಿತಿಯಲ್ಲಿ ಇದ್ದಾರೆಯೇ? ತೇಜಸ್ವಿಸೂರ್ಯ ರಾಜಕೀಯಕ್ಕಾಗಿ ಹೆಲಿಕಾಪ್ಟರ್‌ನಲ್ಲಿ ಬಂದು ಹೋಗಿದ್ದಾರೆ. ಸಮಿತಿ ಭೇಟಿ ಬಗ್ಗೆ ಯಾವುದಾದರೂ ಅಧಿಕಾರಿಗಳಿಗೆ ತಿಳಿಸಿದ್ದಾರೆಯೇ? ಭೇಟಿ ಮಾಡಿ ಎಂದು ಯಾರಾದರೂ ಮನವಿ ಮಾಡಿದ್ದರೇ? ಬಿಜೆಪಿ ಕಾಲದಲ್ಲಿಯೇ ಎಲ್ಲ ಪಹಣಿಗಳನ್ನು ಬದಲಾವಣೆ ಮಾಡಲಾಯಿತು. ಶೀಘ್ರದಲ್ಲಿಯೇ ಆ ಕುರಿತ ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದರು.

Latest Videos
Follow Us:
Download App:
  • android
  • ios