Asianet Suvarna News Asianet Suvarna News

ಯಾದಗಿರಿ ಜಿಲ್ಲೆಗೆ 7 ವರ್ಷದ ಬಳಿಕ ಲಭಿಸುತ್ತಾ ಮಂತ್ರಿಗಿರಿ..?

ಕಳೆದ 7 ವರ್ಷಗಳಿಂದ ಯಾದಗಿರಿ ಜಿಲ್ಲೆಗೆ ಮಂತ್ರಿಸ್ಥಾನ ಸಿಕ್ಕಿಲ್ಲ. ಈ ಬಾರಿ ಸಿದ್ದರಾಮಯ್ಯ ಸರ್ಕಾರದಲ್ಲಾದರೂ ಮಂತ್ರಿಭಾಗ್ಯ ಒಲಿಯುವುದೇ ಕಾದು ನೊಡಬೇಕಿದೆ.

Karnataka new chief minister Yadgiri District Minister after 7 years sat
Author
First Published May 19, 2023, 8:46 PM IST

ವರದಿ: ಪರಶುರಾಮ ಐಕೂರ್, ಏಷ್ಯಾನೆಟ್ ಸುವರ್ಣ ನ್ಯೂಸ್
ಯಾದಗಿರಿ (ಮೇ 19): ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸುವ ಮೂಲಕ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದೆ. ನಾಳೆ ಸಿದ್ದರಾಮಯ್ಯ ನವರು ಸಿಎಂ ಹಾಗೂ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಸಚಿವ ಸಂಪುಟದಲ್ಲಿ ಯಾರ್ಯಾರಿಗೆ ಮಂತ್ರಿಗಿರಿ ಲಭಿಸುತ್ತೆ ಎಂಬ ಗುಟ್ಟನ್ನು ಹೈಕಮಾಂಡ್ ಇನ್ನು ಬಿಟ್ಟು ಕೊಡ್ತಿಲ್ಲ. ಇನ್ನು ಯಾದಗಿರಿ ಜಿಲ್ಲೆಯವರಿಗೆ ಕಳೆದ 7 ವರ್ಷದಿಂದ ಇಲ್ಲಿಯವರೆಗೆ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬಾಬುರಾವ್ ಚುಂಚನಸೂರ್ ಅವರು 2013 ರಿಂದ 2016 ರ ವರೆಗೆ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಬಂದರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈಗ ಯಾದಗಿರಿ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡ್ತಾರಾ ಎಂಬುದನ್ನು ಕಾದು ನೋಡುಬೇಕಾಗಿದೆ.

ಮಾಳಿಂಗರಾಯನ ಆಜ್ಞೆಯಂತೆ ಸಿದ್ದರಾಮಯ್ಯಗೆ ಸಿಎಂ ಹುದ್ದೆ: ವರ್ಷದ ಹಿಂದಿನ ಭವಿಷ್ಯ ನಿಜವಾಯ್ತು!

ಮೂವರಲ್ಲಿ ಯಾರಿಗೆ ಸಚಿವ ಸ್ಥಾನ:
2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದೆ. ಅದರಂತೆ ಈ ಬಾರಿ ಯಾದಗಿರಿ ಜಿಲ್ಲೆಯಲ್ಲೂ ಕಾಂಗ್ರೆಸ್ ಪಕ್ಷ ನಾಲ್ಕರಲ್ಲಿ ಮೂರು ಸ್ಥಾನಗಳನ್ನು ಗಳಿಸಿದೆ. ಸುರಪುರದಿಂದ ರಾಜಾ ವೆಂಕಟಪ್ಪ ನಾಯಕ, ಶಹಾಪುರ ಮತಕ್ಷೇತ್ರದಿಂದ ಶರಣಬಸಪ್ಪ ದರ್ಶನಾಪುರ ಹಾಗೂ ಯಾದಗಿರಿ ಮತಕ್ಷೇತ್ರದಿಂದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದರಿಂದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ರಾಜಕೀಯ ತವರೂರು ಕಲಬುರಗಿ ವಿಭಾಗದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಒಟ್ಟಾರೆ ಕಲಬುರಗಿ-ಯಾದಗಿರಿ ವಿಭಜಿತ ಜಿಲ್ಲೆಯಲ್ಲಿ 10 ಸ್ಥಾನಗಳನ್ನು ಗಳಿಸಿದೆ. ಈಗ ಕಾಂಗ್ರೆಸ್ ಪಕ್ಷದ ಅಧಿಪತಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬ ಪ್ರಶ್ನೆ ಎದುರಾಗಿದೆ. ಮೂವರಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದೇ ಸಸ್ಪೆನ್ಸ್.

ಖರ್ಗೆ ಆಪ್ತ ರಾಜಾ ವೆಂಕಟಪ್ಪ ನಾಯಕನಿಗೆ ಒಲಿಯುತ್ತಾ ಮಿನಿಸ್ಟರ್: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ತಂದೆ ದಿ.ರಾಜಾ ಕುಮಾರ ನಾಯಕ ಅವರ ಕಾಲದಿಂದಲೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಪ್ತ ಕುಟುಂಬ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜಾ ವೆಂಕಟಪ್ಪ ನಾಯಕರ ನಡುವೆ ಗುರು-ಶಿಷ್ಯರ ಸಂಬಂಧ. ಅದರಿಂದಾಗಿ ಖರ್ಗೆ ಅವರು ಸುರಪುರ ಮತಕ್ಷೇತ್ರಕ್ಕೆ ರಾಜಾ ವೆಂಕಟಪ್ಪ ನಾಯಕ ಅವರಿಗರ ರಾಜಕೀಯವಾಗಿ ಅವಿನಾಭಾವ ಸಂಬಂಧವಿದೆ. ರಾಜಾ ವೆಂಕಟಪ್ಪ ನಾಯಕ ಸುರಪುರ ಮತಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿ ಆಯ್ಜೆಯಾಗಿದ್ದಾರೆ. ಇದು ರಾಜಾ ವೆಂಕಟಪ್ಪ ನಾಯಕ ಅವರ ಕೊನೆ ಚುನಾವಣೆಯಾಗಿತ್ತು,  ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಯಾದಗಿರಿ ಜಿಲ್ಲೆಯ ಹಿರಿಯ ಶಾಸಕ ಹಾಗೂ ಇಲ್ಲಿಯವರೆಗೂ ಮಂತ್ರಿ ಸ್ಥಾನ ಸಿಕ್ಕಿಯೇ ಇಲ್ಲ. ಈ ಬಾರಿಯಾದ್ರೂ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋನಾಲದ ಗಡೇ ದುರ್ಗಾದೇವಿ ಭವಿಷ್ಯ: 9 ಮಂದಿ ಹಿಂದಿಕ್ಕಿ ಡಿ.ಕೆ.ಶಿವಕುಮಾರ್ ಶೀಘ್ರ ಸಿಎಂ ಆಗ್ತಾರೆ

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ದರ್ಶನಾಪುರ: ಶಹಾಪುರ ಮತಕ್ಷೇತ್ರದ ಶಾಸಕ ಶರಣಬಸಪ್ಪ ದರ್ಶನಾಪುರ ಕಾಂಗ್ರೆಸ್ ಶಾಸಕರಲ್ಲಿ ಅತೀ ಹೆಚ್ಚು ಬಾರಿ ಶಾಸಕರಾದವರು. 5 ಬಾರಿ ಶಾಸಕರಾಗಿರುವ ಶರಣಬಸಪ್ಪ ದರ್ಶನಾಪುರ ಅವರು ಜೆಡಿಎಸ್ ನಿಂದ ಎರಡು ಬಾರಿ ಶಾಸಕ, ಎರಡು ಬಾರಿ ಸಚಿವರಾಗಿದ್ದಾರೆ. ಕಾಂಗ್ರೆಸ್ ನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ಕಾಂಗ್ರೆಸ್ ನಿಂದ ಸಚಿವರಾಗಿಲ್ಲ. ಯಾದಗಿರಿ ಜಿಲ್ಲೆಗೆ ಸಚಿವ ಸ್ಥಾನ ಒಲಿಯುತ್ತಾ, ಒಲಿದ್ರೂ ಕೂಡ ಅದು ನನಗೆ ಲಭಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಜೊತೆಗೆ ಶಾಸಕ ಶರಣಬಸಪ್ಪ ದರ್ಶನಾಪುರ ಅವರು ಸಿದ್ದರಾಮಯ್ಯ ನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರು. ಸಿದ್ದರಾಮಯ್ಯ ಜೆಡಿಎಸ್ ತೊರೆದಾಗ ಅವರ ಜೊತೆ ಇವ್ರು ಕೂಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಬಾರಿ ಶತಾಯಗತಾಯ ಸಚಿವ ಸ್ಥಾನ ಪಡೆಯಲೇಬೇಕು ಎಂದು ದರ್ಶನಾಪುರ ಅವರು ಇವತ್ತು ದೆಹಲಿಯಲ್ಲಿ ನಾಯಕರ ಭೇಟಿಯಾಗಿ ಸಚಿವ ಸ್ಥಾನದ ಕುರಿತು ಚರ್ಚಿಸಿದ್ದಾರೆ.

Follow Us:
Download App:
  • android
  • ios