ಬೆಂಗಳೂರು, (ಅ.10):  ಮೂಲ ಕಾಂಗ್ರೆಸ್‌ ನಾಯಕರ ಪ್ರಬಲ ವಿರೋಧದ ನಡುವೆಯೂ ವಿರೋಧ ಪಕ್ಷದ ನಾಯಕ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ಹೊರಬಂದಿದ್ದಾರೆ.

 ಪರಂ, ಪಾಟೀಲರನ್ನು ಹಿಂದಿಕ್ಕಿ ಸಿದ್ದುಗೆ ವಿಪಕ್ಷ ಗದ್ದುಗೆ ಒಲಿದಿದ್ದು ಇದೇ ಕಾರಣಕ್ಕೆ!

ಅವರ ಮನವಿಯಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯತ್ವದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತೆರವುಗೊಳಸಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯತ್ವದಿಂದ ತನ್ನನ್ನು ತೆರವುಗೊಳಿಸುವಂತೆ ಕೆ.ಸಿ. ವೇಣುಗೋಪಾಲ್ ಅವರಲ್ಲಿ ಮನವಿ ಮಾಡಿದ್ದೆ. ರಾಜ್ಯದಲ್ಲಿ ವಿಪಕ್ಷ ನಾಯಕನಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಿಡಬ್ಲ್ಯೂಸಿ ಸದಸ್ಯತ್ವದಿಂದ ಹಿಂದೆ ಸರಿಯುವ ಉದ್ದೇಶವಿತ್ತು. 

ವಿಧಾನಸಭೆ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ, ಪರಿಷತ್‌ಗೆ ಅಚ್ಚರಿ ಆಯ್ಕೆ!

ಅದರಂತೆ ಕಾರ್ಯಕಾರಿ ಸಮಿತಿ ಸದಸ್ಯತ್ವದಿಂದ ನನ್ನನ್ನು ತೆರವು ಮಾಡಿದ್ದಾರೆ. ಇಷ್ಟು ದಿನ ಸಿಡಬ್ಲ್ಯೂಸಿಯ ಸದಸ್ಯನಾಗಿ ಸೇವೆ ಮಾಡಲು ಅವಕಾಶ ಕೊಟ್ಟ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಟ್ವಿಟ್ಟರ್ ಬರೆದುಕೊಂಡಿದ್ದಾರೆ.

ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷ ಸ್ಥಾನ ನೀಡಬಾರದು, ಒಬ್ಬರಿಗೆ ಒಂದೇ ಹುದ್ದೆ ಮಾತ್ರ ನೀಡಬೇಕು ಎಂದು ಹಲವರು ಎಐಸಿಸಿಗೆ ಮನವಿ ಮಾಡಿದ್ದರು. 

ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಯಲಿ, ಬೇರೊಬ್ಬರನ್ನು ವಿರೋಧ ಪಕ್ಷದ ನಾಯಕನ ಹುದ್ದೆಗೆ ನೇಮಕಮಾಡಬೇಕೆಂದು ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಿಜೆಪಿ ಸರ್ಕಾರಕ್ಕೆ ಟಕ್ಕರ್ ನೀಡಲು ಸಿದ್ದರಾಮಯ್ಯ ಅವರಂತಹ ಪ್ರಬಲ ಪ್ರತಿಪಕ್ಷದ ನಾಯಕ ಎನ್ನುವುದು ಹೈಕಮಾಂಡ್‌ನ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ್ನಾಗಿ ನೇಮಿಸಿದೆ. 

ಈ ಹಿಂದೆಯೂ ಬಿಜೆಪಿ ಸರ್ಕಾರವಿದ್ದಾಗ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಾಗಿದ್ದರು. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡಿದ್ದ ಅವರು ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿದ್ದರು. ಅಂದಿನ ಸರ್ಕಾರದ ವಿರುದ್ಧ ನಿರಂತರವಾಗಿ ಚಾಟಿ ಬೀಸಿದ್ದರು. 

ಅದರಿಂದಾಗಿ 2013ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. ಇದೀಗ ಮತ್ತೆ ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರವಿದ್ದು, ಸಿದ್ದರಾಮಯ್ಯ ಕೂಡ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸಿದ್ದರಾಮಯ್ಯ ಅವರನ್ನು ಸುಲಭವಾಗಿ ತೆಗೆದುಕೊಳ್ಳುವಂತಿಲ್ಲ.