ಬೈ ಎಲೆಕ್ಷನ್‌ನಲ್ಲಿ ಪಕ್ಷಾಂತರಿಗಳಿಗೆ ಸೋಲು: ರಾಜ್ಯದ ಅನರ್ಹ ಶಾಸಕರಿಗೂ ಇದೇ ಗತಿನಾ?
ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಜತೆಗೆ ಇತರೆ ರಾಜ್ಯಗಳಲ್ಲಿ ನಡೆದಿದ್ದ ಬೈ ಎಲೆಕ್ಷನ್ ರಿಸಲ್ಟ್ ಸಹ ಹೊರಬಿದ್ದಿದೆ. ಆದ್ರೆ ಇದರಲ್ಲಿ ಹೆಚ್ಚಾಗಿ ಪಕ್ಷಾಂತರ ಮಾಡಿ ಎಲೆಕ್ಷನ್ ಗೆ ಹೋಗಿದ್ದ ಪಕ್ಷಾಂತಿರಿಗಳು ಸೋಲಾಗಿದೆ. ಇದೇ ರೀತಿ ರಾಜ್ಯದಲ್ಲಿ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಂದು ಟಿಪ್ಪಣಿ ರೂಪದಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು(ಅ. 24): ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಜತೆಗೆ ಇಂದು [ಗುರುವಾರ] ದೇಶಾದ್ಯಂತ 51 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 2 ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
ಚುನಾವಣೆಯಲ್ಲಿ BJP ಮಂದಹಾಸ; ಬಾಂಗ್ಲಾ ಸರಣಿಗೆ ತಂಡ ಪ್ರಕಟ; ಅ.24ರ ಟಾಪ್ 10 ಸುದ್ದಿ!
ಆದ್ರೆ, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ತುಸು ಹಿನ್ನಡೆಯಾಗಿದೆ. 51 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತದರ ಮಿತ್ರಪಕ್ಷಗಳು 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಕಾಂಗ್ರೆಸ್ ಹಾಗು ಮೈತ್ರಿ ಪಕ್ಷದ ಅಭ್ಯರ್ಥಿಗಳು ಸೇರಿ 12 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದರೆ.
ಅದರಲ್ಲಿ ಮೋದಿ ತವರು ಗುಜರಾತಿನಲ್ಲಿ ಪಕ್ಷಾಂತರ ಮಾಡಿ ಬೈ ಎಲೆಕ್ಷನ್ ಗೆ ಹೋಗಿದ್ದವರಿಗೆ ಮತದಾರರ ಸೋಲಿನ ರುಚಿ ತೋರಿಸಿದ್ದಾರೆ. ಒಟ್ಟು ಗುಜರಾತಿನಲ್ಲಿ 6 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 3ರಲ್ಲಿ ಗೆದ್ದುಕೊಂಡಿವೆ. ಆದ್ರೆ, ಬಿಜೆಪಿಯಲ್ಲಿ ಸೋತವರು ಪಕ್ಷಾಂತರ ಮಾಡಿದ್ದವರು ಎನ್ನುವುದು ವಿಶೇಷ.
ಮಹಾ ರಿಸಲ್ಟ್: ಬಿಜೆಪಿಗೆ ಹಿನ್ನಡೆ, ಆದ್ರೆ BSY ಮೊಗದಲ್ಲಿ ಮಂದಹಾಸ!
ಈ ಟ್ರೆಂಡ್ ಕರ್ನಾಟಕ ಬೈ ಎಲೆಕ್ಷನಲ್ಲೂ ಮುಂದುವರೆಯುತ್ತೆ ಎನ್ನುವುದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ 15 ಅನರ್ಹ ಶಾಸಕರ ಕ್ಷೇತ್ರಗಳಲ್ಲಿನ ಉಪ ಚುನಾವಣೆಯಲ್ಲಿ ಬಹುಪಾಲು ಕಾಂಗ್ರೆಸ್ ಪಾಲಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸಿದ್ದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಟಿಪ್ಪಣಿ ರೀತಿಯಲ್ಲಿಯೇ ಮಹಾರಾಷ್ಟ್ರ ಹಾಗೂ ಹರಿಯಾಣ ಫಲಿತಾಂಶದ ಬಗ್ಗೆ ವಿವರಿಸಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಏನು ಬರೆದುಕೊಂಡಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
"ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ.
ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರು, ಜನ ಅವರನ್ನು ತಿರಸ್ಕರಿಸಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು.
ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.
ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ. ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ‌್ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ.
ಹರಿಯಾಣದಲ್ಲಿ ಐದು ತಿಂಗಳ ಹಿಂದೆ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.
ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಮ್ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.
ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ".