ನೂತನ ಸಂಸದರಾಗುತ್ತಿದ್ದಂತೆಯೇ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಮಾಜಿ ಸಿಎಂ ಬೊಮ್ಮಾಯಿ

ಹಾವೇರಿ ಗದಗ ಲೋಕಸಭಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುವುದು ನನ್ನ ಮೊದಲ ಗುರಿಯಾಗಿದೆ. ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ನೂತನ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ ರವಾನಿಸಿದ್ದಾರೆ.

Karnataka People fed up against congress government supported JDS BJP alliance says Bommai sat

ಬೆಂಗಳೂರು (ಜೂ.05): ಹಾವೇರಿ ಗದಗ ಲೋಕಸಭಾ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುವುದು ನನ್ನ ಮೊದಲ ಗುರಿಯಾಗಿದೆ. ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ನೂತನ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ ರವಾನಿಸಿದ್ದಾರೆ.

ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ. ದೇಶದಲ್ಲಿ ನೋಡಿದಾಗ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ.  ಕೆಲವು ಕಡೆ ನಿರೀಕ್ಷಿತ ಮಟ್ಟದಲ್ಲಿ  ಆಗಿಲ್ಲ. ಒಂದು ವಿಶ್ವಾಸ ಇದೆ, ಎಂತಹ ಸಂಧರ್ಭದಲ್ಲಾದರೂ ಮೋದಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಮೋದಿಯವರು ಬಹಳ ವಿಭಿನ್ನವಾಗಿ ರಾಜಕಾರಣ ನಡೆಸಿಕೊಂಡು ಬಂದಿದ್ದಾರೆ. ಗುಜರಾತ್ ಗಲಭೆ ನಿರ್ವಹಿಸಿಕೊಂಡು ಬಂದರು. ಬಹಳ ಪೈಪೋಟಿ ಇದ್ದರೂ ಸಂಪೂರ್ಣ ಮೆಜಾರಿಟಿ ತಂದರು. ಎರಡನೇ ಬಾರಿ ಬಹುಮತ ಹೆಚ್ಚಿಸಿ ಎನ್‌ಡಿಎ ವಿಸ್ತಾರ ಮಾಡಿದ್ದಾರೆ. ಇದೆಲ್ಲಾ ನೋಡಿದಾಗ ರಾಜಕೀಯವಾಗಿ ಮುತ್ಸದ್ದೀತನ ಮಾಡಿದ್ದಾರೆ. ಇಂಡಿ ಘಟಬಂಧನ್ ನೋಡಿದರೆ ಅಲ್ಲಿ ಯಾವುದೇ ಬೆಳವಣಿಗೆ ಇಲ್ಲ. ಕಾಂಗ್ರೆಸ್ ನಂಬಿಕೊಂಡು ಹೋಗುವ ಕೆಲಸ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು ನಾಯ್ಡು ಮಾಡುವುದಿಲ್ಲ. ಈ ಬಾರಿ ಎನ್ ಡಿಎ ಸಾಧನೆ  ಹೇಗಿದೆ ಅಂದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೋಲಿಸಿದರೆ ಈ ಬಾರಿ ಉತ್ತಮವಾಗಿದೆ. ಜಾತಿ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

ಮೈತ್ರಿಗೆ ಬೆಂಬಲ: ಮೋದಿ ಅವರನ್ನು ಅತ್ಯಂತ ಟೀಕೆ ಮಾಡಿದ್ದರು.  ಕಾಂಗ್ರೆಸ್ ಮಿತ್ರ ಪಕ್ಷಗಳ ಹೆಗಲ‌ ಮೇಲೆ ಕೂತು ಕೆಲಸ ಮಾಡಿದೆ. ಅವರ ಸ್ವಂತ ಬಲದಿಂದ ಅಲ್ಲ. ಮಿತ್ರ ಪಕ್ಷದ ಬಲದಿಂದ ಅಷ್ಟು ಸೀಟು ಗೆದ್ದಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮವಾಗಿದೆ. ಉತ್ತಮ‌ ಮತಗಳು ನಮಗೆ ಬಂದಿದೆ. ಜನ ಸರ್ಕಾರದ ವಿರುದ್ಧ ಬೇಸತ್ತು, ಮೈತ್ರಿ ಬೆಂಬಲಿಸಿದ್ದಾರೆ. ಸಿದ್ದರಾಮಯ್ಯ ಮೋದಿ ಗ್ಯಾರಂಟಿ ಫೇಲ್ ಆಗಿದೆ ಎಂದು  ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರಂಟಿ ನಡುವೆ ನಾವು ಸಾಧನೆ ಮಾಡಿದ್ದೇವೆ. ಇವರು ಕರ್ನಾಟಕದಲ್ಲಿ‌ 20 ಸ್ಥಾನ ಗೆಲ್ಲುವುದಾಗಿ ಹೇಳಿದ್ದರು. 9ಕ್ಕೆ ಬಂದು ನಿಂತಿದ್ದಾರೆ. ಡಿಕೆ ಬ್ರದರ್ಸ್ ಸೋತಿದ್ದಾರೆ. ಅವರಿಗೆ ಮಾತನಾಡಲು ನೈತಿಕತೆ ಇಲ್ಲ ಎಂದರು.

ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು. ನನ್ನ ಗೆಲುವಿಗೆ ಕಾರಣರಾದ ಹಾವೇರಿ ಗದಗ ಜಿಲ್ಲೆಗಳ ಜನರಿಗೆ ಕೋಟಿ ಕೋಟಿ  ನಮನಗಳು, ಮಹಾಜನತೆಯ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದೇನೆ. ಈಗಾಗಲೇ ಸಂದೇಶ ಬಂದಿದೆ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ .ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕೊಟ್ಟ ಮಾತಿನಂತೆ ಶಾಸಕ ಸ್ಥಾನಕ್ಕೆ ಪ್ರದೀಶ್ ಈಶ್ವರ್ ರಾಜೀನಾಮೆ; ವೈರಲ್ ಪತ್ರದ ಅಸಲಿಯತ್ತೇನು?

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನಶಕ್ತಿ, ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ. ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ತುಂಬು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

ಇನ್ನು ಸಚಿವ ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಕ್ರಮ ಸಾಬೀತಾಗಿದೆ, ಎಸ್ ಐಟಿ ತನಿಖೆ ಮಾಡುತ್ತಿದೆ. ಸಿಬಿಐ  ಎಂಟ್ರಿ ಆಗಿದೆ. ಎಸ್ ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸಮಸ್ಯೆ ಇಲ್ಲ. ಇಲ್ಲದಿದ್ರೆ ಸಿಬಿಐ ತನಿಖೆ ಶುರು ಮಾಡಲಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios