ಬಿಜೆಪಿಯಲ್ಲಿ 75 ವರ್ಷಕ್ಕೆ ರಾಜಕೀಯ ನಿವೃತ್ತಿ : ಕಾಂಗ್ರೆಸ್‌ಗೂ ಬಂದರೊಳಿತು ಎಂದ ಸತೀಶ್ ಜಾರಕಿಹೊಳಿ
* ಬಿಜೆಪಿಯಲ್ಲಿ 75 ವರ್ಷಕ್ಕೆ ರಾಜಕೀಯ ನಿವೃತ್ತಿ ನಿಯಮ ಹಿನ್ನೆಲೆ
* ಕಾಂಗ್ರೆಸ್ ನಲ್ಲೂ ಆ ರೀತಿಯ ನಿಮಯ ಮಾಡಿದ್ರೆ ಒಳ್ಳೆದು,
* ಶಾಸಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ,
* MLC ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ
ಚಿಕ್ಕೋಡಿ(ಅ. 03) ಬಿಜೆಪಿಯಲ್ಲಿ 75 ವರ್ಷಕ್ಕೆ ರಾಜಕೀಯ ನಿವೃತ್ತಿ (Retirment) ನಿಯಮ ಹಿನ್ನೆಲೆ. ಕಾಂಗ್ರೇಸ್ ನಲ್ಲೂ ಆ ರೀತಿಯ ನಿಮಯ ಮಾಡಿದ್ರೆ ಒಳ್ಳೆದು ಎಂದು ಶಾಸಕ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ (Working President) ಸತೀಶ್ ಜಾರಕಿಹೊಳಿ (Satish Jarkiholi) ಹೇಳಿಕೆ ನೀಡಿರುವುದು ಸಹಜವಾಗಿಯೇ ರಾಜಕಾರಣದ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ (Congress) ಪಕ್ಷದಲ್ಲೂ ಸಹ 75 ವರ್ಷ ಆದವರಿಗೆ ರಾಜಕೀಯ ನಿವೃತ್ತಿ ನೀತಿ ತರಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಅಸ ರೀತಿ ನಿಯಮ ತಂದ್ರೆ ಒಳ್ಳೆದು ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಎಂಎಲ್‌ಸಿ (MLC) ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ವಿಚಾರದ ಬಗ್ಗೆಯೂ ಮಾತನಾಡಿದರು. ಪಕ್ಷದ ವರಿಷ್ಠರಿದ್ದಾರೆ,ಗೆಲ್ಲುವಂತ ಅಭ್ಯರ್ಥಿಗೆ ಟಿಕೇಟ್ ನೀಡ್ತಿವಿ ಎಂದು ಜಾರಕಿಹೊಳಿ ತಿಳಿಸಿದರು.
ಮುಂದಿನ ಚುನಾವಣೆಗೆ ಬಿಜೆಪಿಗೆ ಹೋದ 17 ಮಂದಿಗಿಲ್ಲ ಕಾಂಗ್ರೆಸ್ ಟಿಕೆಟ್
ಅಂತಿಮವಾಗಿ ರಾಜ್ಯದ ನಾಯಕರು ಟಿಕೇಟ್ ಬಗ್ಗೆ ನಿರ್ಧಾರ ಮಾಡುತ್ತಾರೆ. ಲಖನ್ ಜಾರಕಿಹೊಳಿ ಎಂ ಎಲ್ ಸಿ ಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದರ ಬಗ್ಗೆ ಮಾತನಾಡಿ ಅವರ ಪಕ್ಷ ಅವರ ನಿರ್ಧಾರ ನಮಗೆ ಸಂಬಂಧ ಇಲ್ಲ ಎನ್ನುವ ಅರ್ಥದಲ್ಲಿ ಮಾಡತನಾಡಿದರು.
ಕರ್ನಾಟಕದಲ್ಲಿ ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತ್ರ ಹಿಂದಿನ ವಿಧಾನಸಭಾ ಚುನಾವಣೆ ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ನಿವೃತ್ತಿ ಎಂಬ ನಿಯಮವಿದ್ದು, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಆದರೆ, ಕಾಂಗ್ರೆಸ್‌ನಲ್ಲಿ ಹಿರಿಯರಿಗೂ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಅಲ್ಲದೇ ಯುವ ನಾಯಕರಿಗೂ ಮಣೆ ಹಾಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆ ಪಕ್ಷದಲ್ಲಿ ಸದಾ ಒಂದಲ್ಲೊಂದು ಸಮಸ್ಯೆಗಳು ತಲೆದೂರುತ್ತಿದ್ದು, ಪಕ್ಷ ಸಂಘಟನೆಗೆ ಕುಂದು ತರುತ್ತಿದೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಯವರು ಇಂಥದ್ದೊಂದು ಹೇಳಿಕೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ಇನ್ನಾದರೂ ಬದಲಾವಣೆ ಪರ್ವವನ್ನು ನಿರೀಕ್ಷಿಸಬಹುದ ಎಂದು ಕಾರ್ಯಕರ್ತರು ನಿರೀಕ್ಷಿಸುತ್ತಿದ್ದಾರೆ.