ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಆದ್ರೆ, ಅವರು ನಿಜವಾಗಿಯೂ ಸಾವನ್ನಪ್ಪಿದ್ದಾರಾ? ಅಥವಾ ಇಲ್ವಾ..?
ಬೆಂಗಳೂರು, (ಆ.04): ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ನಿಧನ ಗೊಂದಲಮಯವಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಕೆಲದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಇನ್ನೂ ಹೃದಯ ಬಡಿತವಿದ್ದು, ವೆಂಟಿಲೇಟರ್ನಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಸಾಗರ ಶಾಸಕ ಹರತಾಳು ಹಾಲಪ್ಪನವರಿಗೆ ಕೊರೋನಾ ಸೋಂಕು..!
ಆದ್ರೆ, ಮತ್ತೊಂದೆಡೆ ಇಂದು (ಮಂಗಳವಾರ) ಮಧ್ಯಾಹ್ನ 12.30ರ ಸುಮಾರಿಗೆ ಸತ್ಯನಾರಾಯಣ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆಸ್ಪತ್ರೆಗಳು ಮೂಲಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ಹೇಳುತ್ತಿದ್ದರೂ, ಸಚಿವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ
ಸ್ವತಃ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸೇರಿದಂತೆ ಪಕ್ಷದ ನಾಯಕರುಗಳು ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಗೃಹ ಸಚಿವರು, ಡಿಸಿಎಂ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಸಚಿವರುಗಳು ಸಾಮಾಜಿಕ ಜಾಲತಾಗಳಲಲ್ಇ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್‌ಡೌನ್
"
