ಬೆಂಗಳೂರು, (ಸೆ.30) : ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಿದ್ದು, ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಪ್ರಕರಣದ ತೀರ್ಪನ್ನು ನೀಡುವಾಗ ನ್ಯಾಯಾಲಯ 1992ರಲ್ಲಿ ನಡೆದ ಮಸೀದಿ ಧ್ವಂಸವು ಪೂರ್ವ ನಿಯೋಜಿತವಾಗಿರಲಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದು ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

ನ್ಯಾಯಾಂಗಕ್ಕೆ ಇದು ಕಪ್ಪು ಚುಕ್ಕೆ: ಬಾಬ್ರಿ ತೀರ್ಪಿಗೆ ಮಾಜಿ ಸಿಎಂ ಮಗನ ಪ್ರತಿಕ್ರಿಯೆ! 

ಇನ್ನು ಈ ತೀರ್ಪಿನ ಬಗ್ಗೆ ಕರ್ನಾಟಕದ ವಿವಿಧ ನಾಯಕರು ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಯಾರು ಏನು ಹೇಳಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. 

ಸಿ.ಟಿ. ರವಿ ಪ್ರತಿಕ್ರಿಯೆ
ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, "ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಜನ ಆಪಾದಿತರನ್ನು ಕೋರ್ಟ್ ದೋಷಮುಕ್ತಗೊಳಿಸಿದೆ. ಪ್ರಕರಣ ಪೂರ್ವಯೋಜಿತವಲ್ಲ ಅನ್ನೋದನ್ನು ತೀರ್ಪು ಎತ್ತಿ ಹಿಡಿದಿದೆ. ತೀರ್ಪನ್ನು ಬಿಜೆಪಿ ಪಕ್ಷವು ಸ್ವಾಗತಿಸುತ್ತದೆ. ಇದನ್ನು ನೆಪವಾಗಿಟ್ಕೊಂಡು 1992ರಲ್ಲಿ ಬಿಜೆಪಿಯ ನಾಲ್ಕು ಸರ್ಕಾರಗಳನ್ನು ವಜಾ ಮಾಡುವ ಕೆಲಸ ನಡೆಯಿತು. ಸತ್ಯವನ್ನು ನ್ಯಾಯಾಲಯ ಎತ್ತಿ ಹಿಡಿದಿದ್ದು, ಈತೀರ್ಪನ್ನು ಸ್ವಾಗತಿಸುತ್ತೇನೆ. ಆವತ್ತು ನಾಲ್ಕು ಬಿಜೆಪಿ ಸರ್ಕಾರಗಳನ್ನು ವಜಾ ಮಾಡಿದ ಕಾಂಗ್ರೆಸ್ ದೇಶದ ಜನತೆಯ ಕ್ಷಮೆ ಕೇಳಲಿ. ಇತಿಹಾಸ ಬಲ್ಲವರಿಗೆ ವಾಸ್ತವಿಕ ಸತ್ಯ ಗೊತ್ತಿದೆ. ಬಿಜೆಪಿಯ ಅಜೆಂಡಾದಲ್ಲಿ ಮಸೀದಿ ಒಡೆಯುವುದು ಇರಲಿಲ್ಲ ಎಂದಿದ್ದಾರೆ. 

ಶ್ರೀರಾಮುಲು ರಿಯಾಕ್ಷನ್
ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, "ಬಾಬರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ, ಈ ಆರೋಪದ ಬಗ್ಗೆ ಯಾವುದೇ ಪ್ರಬಲ ಸಾಕ್ಷ್ಯಾಧಾರ ಇಲ್ಲ. ಅದೊಂದು ಆಕಸ್ಮಿಕ ಘಟನೆ ಅಷ್ಟೇ ಎಂದು ಲಖನೌ ಸಿಬಿಐ ವಿಶೇಷ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಸತ್ಯ ಮೇವ ಜಯತೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಶಿ ಸೇರಿ ಎಲ್ಲಾ ಆರೋಪಿಗಳು ಖುಲಾಸೆ! 

ನಳೀನ್ ಕುಮಾರ್ ಕಟೀಲ್ ಹೇಳಿಕೆ 
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ಐತಿಹಾಸಿಕ ಅಂತಿಮ ತೀರ್ಪು ನೀಡಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸೋಣ" ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಥುರಾದಲ್ಲಿ ಮಸೀದಿ ತೆಗೆಯಲು ಈ ತೀರ್ಪು  ಸ್ಪೂರ್ತಿ
ಸುಪ್ರೀಂ ಕೋರ್ಟ್ ತೀರ್ಪು ಸ್ಪೂರ್ತಿ ಸಿಕ್ಕಂತಾಗಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾನಿ, ಉಮಾ ಭಾರತಿ  ಹಲವರು ಖುಲಾಸೆ ಮಾಡಿದ ನ್ಯಾಯಾಲಯದ ತೀರ್ಪು ಪ್ರಪಂಚದ ರಾಷ್ಟ್ರೀಯವಾದಿಗಳಿಗೆ ಸಂತಸ ತಂದಿದೆ. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂದರ್ಭದಲ್ಲಿ32 ಹೋರಾಟಗಾರರಿಗೆ ಹೋರಾಟಕ್ಕೆ ಸಿಕ್ಕ ತೀರ್ಪು. ಮಥುರಾದಲ್ಲಿ ಕೃಷ್ಣನ ಜನ್ಮಸ್ಥಳದಲ್ಲಿ ಕೂಡ ಮಸೀದಿ ತೆಗೆಯಲು ಈ ತೀರ್ಪು  ಸ್ಪೂರ್ತಿಯಾಗಿದ್ದು, ಇವತ್ತಿನ ಇನ್ನೊಂದು ಸಂತೋಷ ಅಂದರೆ ಶ್ರದ್ಧಾ ಕೇಂದ್ರಗಳು ಮಸೀದಿ ಮುಕ್ತವಾಗ ಬೇಕು ಎಂದಿದ್ದಾರೆ.

ಮಥುರಾ ದಲ್ಲಿ ಕರಸೇವೆ ಆಗಲು ನ್ಯಾಯಾಲಯದ ಬಿಡೋದಿಲ್ಲ ಅನ್ಸುತ್ತೆ. ಮಥುರಾ ದಲ್ಲಿ ಕರಸೇವೆ ಆಗದೇ ಪೂರ್ಣ ಪ್ರಮಾಣದ ಶ್ರೀ ಕೃಷ್ಣನ ದೇಗುಲ ನಿರ್ಮಾಣ ಆಗಬೇಕು. ಅಯೋಧ್ಯೆಯ ಬಾಬ್ರಿ ಮಸೀದಿ ಧ್ವಂಸಕ್ಕೆ ಕಾರಣವಾದಂತೆ ಮಥುರಾದಲ್ಲಿ ಆಗಬಾರದು. ಅಲ್ಲೂ ಕರಸೇವೆ ನಡೆದರೆ ಆಶ್ಚರ್ಯ ಇಲ್ಲ ಎಂದು ತಿಳಿಸಿದರು.