Asianet Suvarna News Asianet Suvarna News

ಇದು ಕರ್ನಾಟಕವೇ ಹೊರತು, ಡಿಕೆಶಿ ರಿಪಬ್ಲಿಕ್‌ ಅಲ್ಲ ಡೂಪ್ಲಿಕೇಟ್‌ ಸಿಎಂ ಎಂದ ಎಚ್.ಡಿ. ಕುಮಾರಸ್ವಾಮಿ!

ಕುಮಾರಸ್ವಾಮಿಗೂ ಗ್ಯಾರಂಟಿ ಯೋಜನೆಗೂ ಏನು ಸಂಬಂಧವೆಂದು ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ ಡೂಪ್ಲಿಕೇಟ್‌ ಸಿಎಂ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ.

Karnataka Political War Former CM HD Kumaraswamy said to DK Shivakumar for Duplicate CM sat
Author
First Published Nov 13, 2023, 6:56 PM IST

ಬೆಂಗಳೂರು (ನ.13): ರಾಜ್ಯ ರಾಜಕಾರಣದಲ್ಲಿ ಆಪರೇಶನ್‌ ಹಸ್ತ ಮಾಡುವುದಿಲ್ಲವೆಂದು ಹೇಳುತ್ತಾ ಜೆಡಿಎಸ್‌ ಹಾಗೂ ಬಿಜೆಪಿಯಿಂದ ಹಲವು ನಾಯಕರನ್ನು ಕಾಂಗ್ರೆಸ್‌ ತನ್ನ ತೆಕ್ಕೆಗೆ ಹಾಕಿಕೊಳ್ಳುತ್ತಿದೆ. ಚುನಾವಣೆಗಾಗಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳು ವಿಫಲವಾಗುತ್ತಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಖಡಕ್‌ ಉತ್ತರ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗ್ಯಾರಂಟಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದು ಟೀಕಿಸಿದ್ದರು. ಇದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ ಡೂಪ್ಲಿಕೇಟ್‌ ಸಿಎಂ (DCM) ಎಂದು ಟ್ವೀಟ್‌ ಮೂಲಕ ಖಾರವಾಗಿಯೇ ತಿರುಗೇಟು ಕೊಟ್ಟಿದ್ದಾರೆ.

ಇಲ್ಲಿದೆ ಟ್ವೀಟ್‌ ವಿವರ: ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ.

ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ: ಅಭಯ ಕೊಟ್ಟ ದೊಡ್ಡಗೌಡ್ರು

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ 'ಆರ್ಥಿಕವೈಕಲ್ಯ' ರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; 'ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು' ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ.

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ.

ದಪ್ಪಗಿದ್ದೇನೆಂದು ಮನನೊಂದು ಮಂಗಳೂರು ಎಜೆ ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು 'ಯುವನಿಧಿ' ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ?

ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, 'ರಾಮನಗರ' ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಕಾಂಗ್ರೆಸ್‌ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ.  ಜೊತೆಗೆ #TemporaryCM_DuplicateCM #TCM_DCM ಎಂದು ಹ್ಯಾಶ್‌ಟ್ಯಾಗ್‌ ಕೊಟ್ಟಿದ್ದಾರೆ. 

Follow Us:
Download App:
  • android
  • ios