ಟ್ವೀಟರ್‌ನಲ್ಲಿ ಈಶ್ವರಪ್ಪ-ಎಚ್‌ಡಿಕೆ ವಾಗ್ಯುದ್ಧ| ಕುಮಾರಸ್ವಾಮಿಯಂತಹ ಯುಗಪುರುಷನನ್ನು ಪಡೆದ ರಾಜ್ಯ ಧನ್ಯ: ಈಶ್ವರಪ್ಪ ವ್ಯಂಗ್ಯ| ನಿಮ್ಮ ಮೇಲೆ ರೇಪ್‌ ಆದರೆ ಏನ್ಮಾಡೋಕಾಗುತ್ತೆ ಎಂದ ಪೆಕರ ನಾನಲ್ಲ: ಕುಮಾರಸ್ವಾಮಿ

ಬೆಂಗಳೂರು[ಜ.19]: ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಬ್ರಿಗೇಡ್‌ ಸಂಸ್ಥಾಪಕ ಸೂಲಿಬೆಲೆ ಚಕ್ರವರ್ತಿ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ನಡುವೆ ಟ್ವೀಟರ್‌ನಲ್ಲಿ ವಾಕ್ಸಮರ ನಡೆದಿದೆ.

Scroll to load tweet…

ತೇಜಸ್ವಿ ಸೂರ್ಯ ಮತ್ತು ಸೂಲಿಬೆಲೆ ಚಕ್ರವರ್ತಿ ಯುಗಪುರುಷರಾ ಎಂಬ ಕುಮಾರಸ್ವಾಮಿ ಹೇಳಿಕೆಗೆ ಟ್ವೀಟರ್‌ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ, ಅಂದು ತಿನ್ನಲು ಗತಿ ಇಲ್ಲದವರು ಮಾತ್ರ ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿದ ಈ ಯುಗಪುರುಷ, ಪುಲ್ವಾಮ ದಾಳಿಗೆ ಭಾರತೀಯ ಸೈನ್ಯ ಪ್ರತ್ಯುತ್ತರ ನೀಡಿದಾಗ ಸಂಭ್ರಮಾಚರಣೆ ಮಾಡಬೇಡಿ, ಒಂದು ಕೋಮಿಗೆ ಬೇಜಾರಾಗುತ್ತದೆ ಎಂದೂ ತಮ್ಮ ಅಣಿಮುತ್ತುಗಳನ್ನು ಉದುರಿಸಿ ಅತ್ತಿದ್ದರು. ಇಂತಹ ಯುಗಪುರುಷನನ್ನು ಪಡೆದ ಕರ್ನಾಟಕವೇ ಧನ್ಯ. ಅವರ ಯೋಗ್ಯತೆಗೆ ತಕ್ಕ ಮಾತು ಎಂದು ತಿಳಿಸಿದ್ದಾರೆ.

Scroll to load tweet…

40 ವರ್ಷದ ಕಾಂಗ್ರೆಸ್ ನಂಟು ಬಿಟ್ಟು ಬೆಂಬಲಿಗರ ಜೊತೆ ಜೆಡಿಎಸ್ ಸೇರಿದ ಮುಖಂಡ

ಈಶ್ವರಪ್ಪ ಟ್ವೀಟರ್‌ಗೆ ಪ್ರತಿಯಾಗಿ ತಿರುಗೇಟು ನೀಡಿದ ಕುಮಾರಸ್ವಾಮಿ, ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರ್ಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ ಎಂದು ಕಿಡಿಕಾರಿದ್ದಾರೆ.

Scroll to load tweet…

ಉಪಮುಖ್ಯಮಂತ್ರಿ ಹುದ್ದೆ ಯಾರಿಗೆ ಇಷ್ಟವಿಲ್ಲ? ವಯಸ್ಸಿಗೆ ಬಂದವರಿಗೆಲ್ಲರಿಗೂ ನಟಿ ಐಶ್ವರ್ಯ ರೈ ಬೇಕೆಂದು ಬಯಸುತ್ತಾರೆ. ಇರುವುದು ಒಬ್ಬಳೇ ಐಶ್ವರ್ಯ ರೈ ತಾನೆ ಎಂದು ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕೀಳು ಅಭಿರುಚಿ ಮಾತನಾಡಿದವನು ನಾನಲ್ಲ. ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಮರ ವೋಟ್‌ಗಳಿವೆ. ಈವರೆವಿಗೂ ಒಬ್ಬ ಮುಸ್ಲಿಮರಿಗೂ ನಮಸ್ಕಾರ ಹೊಡೆದು ವೋಟ್‌ ಕೇಳಿಲ್ಲ. ಆದರೂ 47 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ. ರಾಷ್ಟ್ರಭಕ್ತ ಮುಸ್ಲಿಂ ಬಿಜೆಪಿಗೆ ವೋಟ್‌ ಹಾಕುತ್ತಾನೆ, ಪಾಕಿಸ್ತಾನ ಪರ ಇರುವ ಮುಸ್ಲಿಂ ಬಿಜೆಪಿಗೆ ವೋಟ್‌ ಹಾಕಲು ಹಿಂದೆ ಮುಂದೆ ನೋಡುತ್ತಾರೆ ಎಂದವನು ನಾನಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

'HDK ಸಿಡಿ, ವಿಡಿಯೋಗಳು ಬಹಳ ಇವೆ, ಬಿಜೆಪಿಯವರದ್ದು ಏನು ಬದನೆಕಾಯಿ ನೋಡ್ತೀರಾ'?

Scroll to load tweet…

ಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು. ಈ ಬಗ್ಗೆ ಸಿದ್ದರಾಮಯ್ಯ ನಾನು ಏನು ಮಾಡಬೇಕು ಎಂದಿದ್ದರು. ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೆ ಏನು ಮಾಡುತ್ತಾರೆ ಎಂಬ ಕೀಳುಮಟ್ಟದ ಹೇಳಿಕೆ ನೀಡಿದವನು ನಾನಲ್ಲ. ಎಂತೆಂತಹ ಅದ್ಭುತವಾದ ಅಣಿಮುತ್ತುಗಳನ್ನು ಉದುರಿಸಿದ ತಮ್ಮಿಂದ ಯುಗಪುರುಷ ಎಂಬ ಸರ್ಟಿಫಿಕೇಟ್‌ ಪಡೆಯುವ ಮೂರ್ಖ ಪುರುಷ ನಾನಲ್ಲ. ದಿಢೀರ್‌ ನಿದ್ದೆಯಿಂದ ಎದ್ದಂತೆ ಹಳೆಯ ಹೇಳಿಕೆಗೆ ಟ್ವೀಟ್‌ ಮಾಡುವವನು ನಾನಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

"