ಬೆಂಗಳೂರು[ಡಿ.12]: ಉಪಚುನಾವಣೆ ಫಲಿತಾಂಶದ ತರುವಾಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ನ ಹಿರಿಯ ನಾಯಕ ಬಸವರಾಜ ಹೊರಟ್ಟಿಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

3.5 ವರ್ಷದಲ್ಲಿ ರಾಜ್ಯದ ಚಿತ್ರಣ ಬದಲು: ಬಿಎಸ್‌ವೈ

ಬುಧವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಆಗಮಿಸಿದ್ದರು. ಅದೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹೊರಟ್ಟಿಅವರು ಕಾರ್ಯಕ್ರಮದ ಬಳಿಕ ಯಡಿಯೂರಪ್ಪ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಯಾವುದೇ ಆತಂಕ ಇಲ್ಲದೇ ಸರ್ಕಾರ ನಡೆಸುವಂತೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಜನಪರ ಆಡಳಿತ ನೀಡುವಂತೆ ಹೇಳಲಾಗಿದೆ. ಇನ್ನಾವುದೇ ರಾಜಕೀಯ ಕುರಿತು ಚರ್ಚೆ ನಡೆದಿಲ್ಲ. ಬಿಜೆಪಿ ಜತೆ ಜೆಡಿಎಸ್‌ ಹೋಗಬೇಕಿತ್ತು ನಾನು ಮೊದಲೇ ಹೇಳಿದ್ದೆ. ಆದರೆ, ಆ ಮಾತು ಈಗ ಅಪ್ರಸ್ತುತ ಎಂದರು.

ಸೋಲಿಂದ ಧೃತಿಗೆಟ್ಟಿಲ್ಲ, ಮತ್ತೆ ಪುಟಿದೇಳುತ್ತೇವೆ: ರೇವಣ್ಣ