ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ದರ ಏರಿಕೆ ಹಿನ್ನಲೆಯಲ್ಲಿ ನೆಲಮಂಗಲದ ಮಾದಾವರ ನಿಲ್ದಾಣ ಬಳಿ ಪ್ರತಿಭಟನೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ.ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.
- Home
- News
- Politics
- Karnataka Politics Live: ಮೆಟ್ರೋ ದರ ಏರಿಕೆ ವಿರುದ್ದ ಪ್ರತಿಭಟನೆ, ಕಾಂಗ್ರೆಸ್ ವಿರುದ್ಧ ಆಕ್ರೋಶ
Karnataka Politics Live: ಮೆಟ್ರೋ ದರ ಏರಿಕೆ ವಿರುದ್ದ ಪ್ರತಿಭಟನೆ, ಕಾಂಗ್ರೆಸ್ ವಿರುದ್ಧ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಳಜಗಳ ಹೈಕಮಾಂಡ್ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ ಕೈಗೊಂಡಿದೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದಿಢೀರ್ ಅಂತ ದೆಹಲಿಗೆ ತಲುಪಿದ್ದಾರೆ. ಪಕ್ಷದ ವರಿಷ್ಠರ ಬುಲಾವ್ ಮೇರೆಗೆ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇತ್ತ ರಾಜ್ಯ ಕಾಂಗ್ರೆಸ್ನಲ್ಲಿಯೂ ಹೊಸ ಸಿಎಂ, ಡಿಸಿಎಂಗಳ ಲೆಕ್ಕಾಚಾರವು ನಡೆಯುತ್ತಿದೆ. ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಸೇರಿದಂತೆ ಇಂದಿನ ಪ್ರಮುಖ ಬೆಳವಣಿಗೆಗಳ ಸಂಕ್ಷಿಪ್ತ ವಿವರಣೆ ಇಲ್ಲಿದೆ.
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ, ಮಾದಾವರ ನಿಲ್ದಾಣ ಬಳಿ ಬಿಜೆಪಿ ಭಾರಿ ಪ್ರತಿಭಟನೆ
ಸುಳ್ಳು ಭರವಸೆ ನೀಡೋದ್ರಲ್ಲಿ ಕಾಂಗ್ರೆಸ್ ಎತ್ತಿದ ಕೈ, ನಟ ಚೇತನ್ ಅಹಿಂಸಾ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸುಳ್ಳು ಭರವಸೆ ನೀಡಿದೆ. ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಲಿಲ್ಲ ಎಂದು ನಟ ಚೇತನ್ ಅಹಿಂಸಾ ವಾಗ್ದಾಳಿ ನಡೆಸಿದ್ದಾರೆ. ರೈತವಿರೋಧಿ ಕಾನೂನು ತೆಗೆಯಲಿಲ್ಲ, ಯಾವುದಕ್ಕು ನ್ಯಾಯ ಸಿಗಲಿಲ್ಲ ಯಾರು ಹೇಳೋರಿಲ್ಲ, ಕೇಳೋರಿಲ್ಲ ಎಂದಿದ್ದಾರೆ. ನಮಗೆ ಅಧಿಕಾರದ ಬಗ್ಗೆ ಕಾಳಜಿ ಇರೋ ಸರ್ಕಾರ ಬೇಕಿಲ್ಲ, ಜನರ ಬಗ್ಗೆ ಕಾಳಜಿ ಇರೋ ಸರ್ಕಾರ ಬೇಕಿದೆ ಎಂದು ಚೇತನ್ ಹೇಳಿದ್ದಾರೆ.
ಯತ್ನಾಳ್‌ಗೆ ಮತ್ತೊಮ್ಮೆ ನೊಟೀಸ್, 72 ಗಂಟೆಯಲ್ಲಿ ಉತ್ತರಿಸಲು ಸೂಚನೆ
ಕರ್ನಾಟಕ ಬಿಜೆಪಿಯ ಬಂಡಾಯ ನಾಯಕರಾಗಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನೋಟಿಸ್ ಜಾರಿ ಮಾಡಿದ್ದು, 72 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಿದೆ. ಕಳೆದ ನೋಟಿಸ್‌ಗೆ ನೀಡಿದ ಉತ್ತರಕ್ಕೂ ಇದೀಗ ಮಾತನಾಡುತ್ತಿರುವ ರೀತಿಗೂ ವ್ಯತ್ಯಾಸವಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ವಿಜಯೇಂದ್ರ ಮುಂದಿನ ಸಿಎಂ ಆಗಬೇಕೆಂದು ಮಹಾಕುಂಭ ಮೇಳದಲ್ಲಿ ಪೂಜೆ
ಬಿ ವೈ ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಆಶಿಸಿ ಮಹಾಕುಂಭ ಮೇಳದಲ್ಲಿ ಪೂಜೆ ಮಾಡಲಾಗಿದೆ. ರಾಯಚೂರಿನ ವಿಜಯೇಂದ್ರ ಅಭಿಮಾನಿ ನಾಗರಾಜ್ ಪವಾರ್ ಗಂಗಾ- ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಪೂಜೆ ಮಾಡಿದ್ದಾರೆ. ವಿಜಯೇಂದ್ರ ಮುಂದಿನ ಸಿಎಂ ಎಂಬ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಲಾಗಿದೆ.
ಕಾಂಗ್ರೆಸ್ ಪಾಳಯದಲ್ಲಿಯೂ ದೆಹಲಿ ದಂಡಯಾತ್ರೆ
ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸಿದ್ದರಾಮಯ್ಯ ಬಣದ ನಾಯಕರು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಹಲವು ಮನವಿಗಳನ್ನು ಸಲ್ಲಿಸುವ ಸಾಧ್ಯತೆಗಳಿವೆ.
ಬಿಜೆಪಿಯಲ್ಲಿನ ಭಿನ್ನಮತಕ್ಕೆ ಮುನಿರತ್ನ ಪ್ರತಿಕ್ರಿಯೆ
ಕೆಲವರಿಂದ ಎತ್ತಿಕಟ್ಟುವ ಕೆಲಸ ಆಗುತ್ತಿದೆ. ಭಿನ್ನಮತ ಶಮನವಾಗೋದು ಕೆಲವರಿಗೆ ಇಷ್ಟವಿಲ್ಲ. ವಿಪಕ್ಷ ನಾಯಕರಾಗಿರುವ ಆರ್ ಅಶೋಕ್ ಮಧ್ಯ ಪ್ರವೇಶಿಸಿ ಭಿನ್ನಮತ ಸರಿಪಡಿಸಲಿ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.
ನಾವು ಭಿನ್ನಮತೀಯರು ಅಲ್ಲ ಎಂದ ಯತ್ನಾಳ್
ರಾಜ್ಯಾಧ್ಯಕ್ಷರ ವಿಚಾರವನ್ನು ಪಕ್ಷದ ಮುಖಂಡರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ನಮ್ಮೆಲ್ಲರ ವಿಶ್ವಾಸವನ್ನು ತೆಗೆದುಕೊಂಡು ರಾಜ್ಯಾಧ್ಯಕ್ಷರ ನೇಮಕ ಆಗುತ್ತದೆ. ನಾವು ಭಿನ್ನಮತೀಯರು ಅಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಫೈಟ್

ಖರ್ಗೆ ಭೇಟಿಗೆ ಪರಮೇಶ್ವರ್ ಸ್ಪಷ್ಟನೆ
ಮಲ್ಲಿಕಾರ್ಜುನ ಖರ್ಗೆ ನಮ್ಮ ಕುಟುಂಬದ ಹಿರಿಯಣ್ಣ. ರಾಜಕೀಯ ಹೊರತುಪಡಿಸಿ ಆಗಾಗೆ ಭೇಟಿಯಾತ್ತಿರುತ್ತವೆ ಎಂದು ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಪೂಜೆ ನೆಪದಲ್ಲಿ ದೆಹಲಿ ಸೇರಿದ ಬಿಜೆಪಿ ನಾಯಕರು
ಕೇಂದ್ರ ಸಚಿವ ವಿ ಸೋಮಣ್ಣ ಅವರ ನಿವಾಸದ ಪೂಜೆ ನೆಪದಲ್ಲಿ ಬಿಜೆಪಿ ನಾಯಕರು ದೆಹಲಿ ಸೇರಿದ್ದಾರೆ. ಸೋಮಣ್ಣ ಮನೆಯಲ್ಲಿಯೇ ಚರ್ಚೆ ನಡೆಸೋದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ವಿಜಯೇಂದ್ರ ಬದಲಾಗ್ತಾರೆ ಅನ್ನೋ ನಂಬಿಕೆ ಇದೆ
ಮೋದಿ, ಅಮಿತ್ ಶಾ, ನಡ್ಡಾ ಮೇಲೆ ನಂಬಿಕೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾಗ್ತಾರೆ ಅನ್ನೋ ನಂಬಿಕೆ ಇದೆ. ವಿಜಯೇಂದ್ರ ಜೊತೆಯಲ್ಲಿ ಯಾವುದೇ ಸಂಧಾನ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನನ್ನ, ಜನಾರ್ದನ ರೆಡ್ಡಿ ಸಂಬಂಧ ಅಂತ್ಯ, ಅದು ಎಂದೂ ಸರಿಹೋಗಲ್ಲ: ಶ್ರೀರಾಮುಲು
ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಾನು ಬಿಜೆಪಿ ಸಿಎಂ ಅಭ್ಯರ್ಥಿ, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಆಕಾಂಕ್ಷಿ: ಶಾಸಕ ಯತ್ನಾಳ್
ದಿಢೀರ್ ದೆಹಲಿಗೆ ತೆರಳಿದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಭಾನುವಾರ ದಿಢೀರ್ ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ.ಪಕ್ಷದ ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಹೋಗಿದ್ದಾರೆ ಎನ್ನಲಾಗುತ್ತಿದ್ದರೂ ಇದನ್ನು ವಿಜಯೇಂದ್ರ ಅವರ ಆಪ್ತರು ನಿರಾಕರಿಸಿದ್ದಾರೆ. ಖಾಸಗಿ ಕೆಲಸದ ನಿಮಿತ್ತ ತೆರಳಿದ್ದಾರೆ ಎಂಬ ಸಮಜಾಯಿಷಿ ನೀಡುತ್ತಿದ್ದಾರೆ.
ದೆಹಲಿ ತಲುಪಿದ ಯತ್ನಾಳ್ ಬಣದ ಮುಖಂಡರು
ಭಾನುವಾರ ಸಂಜೆ ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿ ಅವರ ಬಣದ ಹಲವು ಮುಖಂಡರು ದೆಹಲಿ ತಲುಪಿದರು. ಇನ್ನೂ ಕೆಲವರು ಸೋಮವಾರ ಬೆಳಗ್ಗೆ ಪ್ರಯಾಣಿಸಲಿದ್ದಾರೆ.