ಬೆಂಗಳೂರು, [ಫೆ.08] ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ ಜರುಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ನೀಡಿದೆ.

ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಚರ್ಚೆ ಮಾಡಲು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಇದ್ರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಳೆ [ಶನಿವಾರ] ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ.

ಸದನದಲ್ಲಿ ಮೊನ್ನೆ BJP ಚೀಟಿ.. ಇಂದು ಕಾಂಗ್ರೆಸ್, ಏನಿದು ಚೀಟಿ ಪಾಲಿಟಿಕ್ಸ್..?

ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದು, ಇಂದೇ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ. ನಾಳೆ ಬೆಳಗ್ಗೆ ಆರು ಗಂಟೆಗೆ ದೆಹಲಿಗೆ ಹೋಗುತ್ತಿದ್ದೇನೆ. ರಾಜ್ಯ ರಾಜಕಾರಣದಲ್ಲಿ ಏನಾಗುತ್ತಿದೆ ಎಂಬುದು ನಿಮಗೆಲ್ಲ ಗೊತ್ತೆ ಇದೆ ಎಂದ ಸಿದ್ದರಾಮಯ್ಯ ಅವರು ಹೈಕಮಾಂಡ್ ಭೇಟಿ ಬಗ್ಗೆ ಸುಳಿವು ಬಿಟ್ಟುಕೊಡಲಿಲ್ಲ.

ಹೈಕಮಾಂಡ್ ಸಿದ್ದರಾಮಯ್ಯ ಅವರ ಜೊತೆ ಪ್ರಸಕ್ತ ರಾಜಕೀಯ ಬೆಳವಣಿಗಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ. ಅಷ್ಟೇ ಅಲ್ಲದೇ ಅತೃಪ್ತ ಶಾಸಕರ ಮೇಲೆ ಯಾವ ರೀತಿ ಕ್ರಮಕೈಗೊಳ್ಳಬೇಕು? ಒಂದು ವೇಳೆ ಕ್ರಮ ಜರುಗಿಸಿದರೆ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀಳುತ್ತಾ? ಅಥವಾ ಮುಂಬರುವ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆಗುತ್ತಾ ಎನ್ನುವುದ ಬಗ್ಗೆ ಚರ್ಚೆಗಳು ನಡೆಯುವ ಸಾಧ್ಯಗಳಿವೆ.