ಮಸ್ಕಿ[ಜ.26]: ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಯಡಿಯೂರಪ್ಪ ಅವರು ಸ್ವತಂತ್ರವಾಗಿ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಆದ್ದರಿಂದ ಹೈಕಮಾಂಡ್‌ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದರು.

ಸಿಎಂಗೆ ವಚನಭ್ರಷ್ಟ ಕಳಂಕ ಅಂಟಿಸಲು ಸೋತವರ ಪ್ರಯತ್ನ?

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿಯವರಗೆ ಶೂನ್ಯ ಮಾಸವಿರುವುದರಿಂದ ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಮಾಡುತ್ತಾರೆಂಬ ವಿಶ್ವಾಸವಿತ್ತು. ಆದರೆ, ಈಗಾಗಲೇ ಸಂಪುಟ ವಿಸ್ತರಣೆಗೆ ವಿಳಂಬವಾಗಿರುವುದರಿಂದ ಎಲ್ಲರಿಗೂ ಸ್ವಲ್ಪ ಮಟ್ಟಿಗೆ ಆತಂಕವಾಗಿರುವುದು ನಿಜ ಎಂದರು. ಈಗ ಸ್ವತಃ ಮುಖ್ಯಮಂತ್ರಿಗಳೇ ಇನ್ನು ಎರಡ್ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗೆದ್ದಿರುವ 11 ಜನ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಅಲ್ಲದೇ ಸರ್ಕಾರ ಅಸ್ತಿತ್ವಕ್ಕೆ ಬರಲು 17 ಜನ ಶಾಸಕರು ಕಾರಣರಾಗಿದ್ದೇವೆ. ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ತಿಳಿಸಿದರು.

ಸರ್ಕಾರದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡುತ್ತಾರೆಂಬ ನಂಬಿಕೆ ನಮಗೆ ಇದೆ. ನನ್ನ ಕ್ಷೇತ್ರದಲ್ಲಿ ಚುನಾವಣೆ ನಡೆಯಲು ವಿಳಂಬವಾಗುತ್ತಿರುವುದರಿಂದ ಸಹಜವಾಗಿ ಕಾರ್ಯಕರ್ತರಲ್ಲಿ ಸ್ವಲ್ಪಮಟ್ಟಿಗೆ ನಿರಾಸೆಯಾಗಿದೆ. ಆದ್ದರಿಂದ ಕಾರ್ಯಕರ್ತರು ಸದ್ಯ ಎಂಎಲ್‌ಸಿ ಮಾಡಿ ಸಚಿವರನ್ನಾಗಿ ಮಾಡಿ ನಂತರ ಚುನಾವಣೆ ಎದುರಿಸೋಣ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಇದೆಲ್ಲವನ್ನು ಪರಿಗಣನೆಗೆ ತೆಗೆದುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆಂಬ ನಂಬಿಕೆ ಇದೆ ಎಂದರು.

ಸಿಎಂಗೆ ವಚನಭ್ರಷ್ಟ ಕಳಂಕ ಅಂಟಿಸಲು ಸೋತವರ ಪ್ರಯತ್ನ?

ಗೆದ್ದವರಿಗೆಲ್ಲಾ ಮಂತ್ರಿ ಸ್ಥಾನ ಸಿಗುತ್ತೆ

ಶೂನ್ಯ ಮಾಸವಿದ್ದುದರಿಂದ ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಮಾಡುತ್ತಾರೆಂಬ ವಿಶ್ವಾಸವಿತ್ತು. ಆದರೆ, ಸಂಪುಟ ವಿಸ್ತರಣೆ ವಿಳಂಬವಾಗಿರುವುದರಿಂದ ಎಲ್ಲರಿಗೂ ಸ್ವಲ್ಪ ಮಟ್ಟಿಗೆ ಆತಂಕವಾಗಿರುವುದು ನಿಜ. 2- 3 ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಗೆದ್ದಿರುವ ಎಲ್ಲ 11 ಶಾಸಕರಿಗೂ ಸಚಿವ ಸ್ಥಾನ ನೀಡುತ್ತಾರೆಂಬ ವಿಶ್ವಾಸವಿದೆ.

- ಪ್ರತಾಪಗೌಡ ಪಾಟೀಲ್‌, ಮಸ್ಕಿ ಅನರ್ಹ ಶಾಸಕ

'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ'