ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಥವಾ ನಾಯಕತ್ವ ಬದಲಾವಣೆಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ತನಗೆ ಎರಡು ಕಣ್ಣುಗಳಿದ್ದಂತೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತೆ ಎಂದರು.

ಮಂಡ್ಯ (ಮೇ.28): ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ(Siddaramaiah) ಅವರು ರಾಜೀನಾಮೆ ನೀಡುವ ವಿಚಾರವಾಗಲೀ, ನಾಯಕತ್ವ ಬದಲಾವಣೆ ವಿಚಾರವಾಗಲೀ ನನಗೆ ಗೊತ್ತಿಲ್ಲ. ಆದರೆ, ನನಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಎರಡು ಕಣ್ಣಿದ್ದಂತೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಬ್ಬರು ನಾಯಕರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ:

ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ರಾಜ್ಯ ನಾಯಕರೇ. 136 ಜನ ಶಾಸಕರು ಗೆದ್ದಿದ್ದು, ಅದರಲ್ಲಿ ಇವರಿಬ್ಬರ ಕೊಡುಗೆ ಅಪಾರವಾದದು. ಹಾಗಾಗಿ ಇಬ್ಬರೂ ನಾಯಕರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದರು. ಗುರುವಾರ ಸಿಎಂ ಉಪಾಹಾರ ಸಭೆ ಕರೆದಿದ್ದಾರೆ. ಅಲ್ಲಿ ದೆಹಲಿಯ ವಿಷಯ ಚರ್ಚೆಗೆ ಬರಬಹುದು. ಎಐಸಿಸಿ ನಾಯಕರು ದೆಹಲಿಯಿಂದ ಬರುತ್ತಿದ್ದು, ಅವರು ಬಂದ ಮೇಲೆ ವಿಚಾರ ಗೊತ್ತಾಗಲಿದೆ ಎಂದರು.

.ಸಿದ್ದರಾಮಯ್ಯ ಅವರ ರಾಜೀನಾಮೆ, ನಾಯಕತ್ವ ಬದಲಾವಣೆ ಚರ್ಚೆಯಾಗಿರುವ ಬಗ್ಗೆ ನನಗಂತೂ ಮಾಹಿತಿ ಇಲ್ಲ.

ನನಗೆ ಗೊತ್ತಿರುವಂತೆ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಲು ಹೈಕಮಾಂಡ್‌ ನಾಯಕರ ಬಳಿ ಹೋಗಿದ್ದರು