Asianet Suvarna News Asianet Suvarna News

ಲೈಂಗಿಕ ದೌರ್ಜನ್ಯ ಕೇಸಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು!

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಮಂಜೂರು ಮಾಡಿದೆ.

Karnataka special court issues  bail to hd revanna in holenarasipura sexual harassment case sat
Author
First Published May 20, 2024, 2:56 PM IST

ಬೆಂಗಳೂರು (ಮೇ 20): ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಮಂಜೂರು ಮಾಡಿದೆ.

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ವೈರಲ್ ಆಗುತ್ತಿದ್ದಂತೆಯೇ ಹೊಳೆ ನರಸೀಪುರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಅವರು ನಾನು ಸ್ಟೋರ್ ರೂಮಿನಲ್ಲಿದ್ದಾಗ ಬಂದು ಲೈಂಗಿಕ ಕಿರುಕುಳ ನೀಡಿದ್ದರು. ಇಷ್ಟೇ ಅಲ್ಲದೇ ಡಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಅವರ ಪುತ್ರ ಪ್ರಜ್ವಲ್ ರೇವಣ್ಣ ಸೊಂಟ ಗಿಂಡುವ ಮೂಲಕ ಲೈಂಗಿಕ ದೌರ್ಜನ್ಯ ನೀಡಿದ್ದರು ಎಂದು ದೂರು ನೀಡಿದ್ದರು. ಹೊಳೆ ನರಸೀಪುರದ ಪೊಲೀಸ್ ಠಾಣೆಯಲ್ಲಿ ರೇವಣ್ಣ ಅವರು ಎ1 ಆರೋಪಿ ಹಾಗೂ ಪ್ರಜ್ವಲ್ ಎ2 ಆರೋಪಿ ಆಗಿದ್ದರು.

ಅತ್ಯಾಚಾರ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ; ರೆಡ್ ಕಾರ್ನರ್ ನೋಟೀಸ್ ಜಾರಿಗೆ ಸಿದ್ಧತೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಮೂರು ದಿನಗಳ ಹಿಂದೆ ರೇವಣ್ಣ ಅವರಿಗೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಇದಾದ ನಂತರ, ಜಾಮೀನು ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಲೈಂಗಿಕ ದೌರ್ಜನ್ಯದ ಕೇಸ್‌ನಡಿ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ನಿರಾಳವಾಗುವಂತಾಗಿದೆ. ಇನ್ನು ರೇವಣ್ಣ ಅವರ ಮೇಲೆ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಕೇಸ್‌ನಲ್ಲಿಯೂ ಜಾಮೀನು ಪಡೆದು ಹೊರಗಿದ್ದಾರೆ. ಆದರೆ, ಜಾಮೀನಿನ ಮೇಲೆ ಹೊರಗಿರುವ ರೇವಣ್ಣ ಅವರಿಗೆ ಜೈಲು ಶಿಕ್ಷೆಯ ತೂಗುಗತ್ತಿ ತೂಗುತ್ತಲೇ ಇರುತ್ತದೆ.

ಪ್ರಜ್ವಲ್ ಓಕೆ, ರೇವಣ್ಣರನ್ನ ಸಿಲುಕಿಸಿರೋದು ಯಾಕೆ? ಮೌನ ಮುರಿದ ದೇವೇಗೌಡ!

ಇನ್ನು ಮಾಜಿ ಸಚಿವ ರೇವಣ್ಣ ಅವರು 5 ಲಕ್ಷ ರೂ. ಮೌಲ್ಯದ ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಲಾಗಿದೆ.  ಸಿಆರ್‌ಪಿಸಿ 436 ಅಡಿ ಜಾಮೀನು ಮಂಜೂರು ಮಾಡಲಾಗಿದೆ. ಇನ್ನು ಮಧ್ಯಂತರ ಜಾಮೀನು ನೀಡಿದಾಗ ನೀಡಿದ್ದ ಶ್ಯೂರಿಟಿಯನ್ನೇ ಈಗಲೇ ಪರಿಗಣಿಸಿ ಬಿಡುಗಡೆ ಮಾಡಲಾಗಿದೆ. ಮಧ್ಯಂತರ ಜಾಮೀನಿನ ವೇಳೆ ಶಿವರಾಜ್ ಎಂಬುವವರು ಶ್ಯೂರಿಟಿ ನೀಡಿದ್ದರು. ಈಗಲೂ ಇದೇ ಶ್ಯೂರಿಟಿ ಮುಂದುವರೆಯಲಿದೆ.

Latest Videos
Follow Us:
Download App:
  • android
  • ios