Asianet Suvarna News Asianet Suvarna News

ಬಿಎಸ್‌ವೈ ಮಹತ್ವದ ಘೋಷಣೆ: ಗಣೇಶ ಹಬ್ಬದ ಬಳಿಕ ಚಾಲನೆ

* ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ
* ಅಪಸ್ವರಗಳಿಗೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ
* ಬಿಎಸ್‌ವೈ ರಾಜ್ಯ ಪ್ರವಾಸಕ್ಕೆ ಪಕ್ಷದಲ್ಲೇ ಅಪಸ್ವರ ಕೇಳಿಬಂದಿದ್ದವು.

Karnataka Tour With all BJP Leaders after Ganesh Festival Says Former CM BS Yediyurappa rbj
Author
Bengaluru, First Published Aug 27, 2021, 4:30 PM IST
  • Facebook
  • Twitter
  • Whatsapp

ಬೆಂಗಳೂರು, (ಆ.27): ರಾಜ್ಯ ಪ್ರವಾಸಕ್ಕೆ ಪಕ್ಷದಲ್ಲೇ ಅಪಸ್ವರ ಕೇಳಿಬಂದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಇಂದು (ಆ.27) ಶಿಕಾರಿಪುರಕ್ಕೆ ತೆರಳುವ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆ ಇಲ್ಲ. ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಿಕಟಪೂರ್ವ, ಅತಿ ನಿಕಟಪೂರ್ವ ಮುಖ್ಯಮಂತ್ರಿ, ಸುಡುಗಾಡೇ ಇರಲಿ: ಬಿಎಸ್‌ವೈಗೆ ಯತ್ನಾಳ್ ಟಾಂಗ್

ಬಹಳ ದಿನಗಳ ಬಳಿಕ ಶಿವಮೊಗ್ಗ, ಶಿಕಾರಿಪುರಕ್ಕೆ ಹೋಗುತ್ತಿದ್ದೇನೆ. ವಾಪಸ್ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ಮುಖಂಡರ ಜೊತೆ ಚರ್ಚಿಸಿ ರಾಜ್ಯ ಪ್ರವಾಸ ದಿನಾಂಕ ನಿಗದಿ ಮಾಡುತ್ತೇವೆ ಎಂದರು.

2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದ ತುಂಬ ಪ್ರವಾಸ ಮಾಡಲೆಂದು ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. 

ಇನ್ನು ಇದಕ್ಕೆ ಪಕ್ಷದಲ್ಲಿ ಅಪಸ್ವರಗಳು ಕೇಳಿಬಂದಿವೆ. ಯಡಿಯೂರಪ್ಪನವರ ರಾಜ್ಯ ಪ್ರವಾಸ ಏಕ ನಿರ್ಧಾರ ಸರಿ ಅಲ್ಲ. ಪಕ್ಷದ ಚೌಕಟ್ಟಿನಲ್ಲಿ ರ್ಚೆಯಾಗಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಇದೀಗ ಬಿಎಸ್‌ವೈ ಸ್ಪಷ್ಟನೆ ಕೊಟ್ಟರು.

Follow Us:
Download App:
  • android
  • ios