ಬಿಜೆಪಿ ಮೈತ್ರಿ ತಿರಸ್ಕರಿಸಿದ ಕೇರಳ ಜೆಡಿಎಸ್
ಎನ್‌ಡಿಎ ಮೈತ್ರಿಕೂಟವನ್ನು ಸೇರುವ ನಿರ್ಧಾರವನ್ನು ದೇವೇಗೌಡ ಹಾಗೂ ಅವರ ಪುತ್ರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರಷ್ಟೇ ತೆಗೆದುಕೊಂಡಿದ್ದಾರೆ. ಈ ನಿರ್ಧಾರಕ್ಕೆ ಪಕ್ಷದ ಸಂಪೂರ್ಣ ನಾಯಕತ್ವ ಒಪ್ಪಿಗೆ ಸೂಚಿಸಿಲ್ಲ. ಪಕ್ಷ ತೆಗೆದುಕೊಂಡಿರುವ ನಿರ್ಧಾರಕ್ಕೆ ವಿರುದ್ಧವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದ ಪಕ್ಷದ ರಾಜ್ಯಾಧ್ಯಕ್ಷ, ಶಾಸಕ ಮ್ಯಾಥ್ಯೂ

ಕೊಚ್ಚಿ(ಅ.28): ಎನ್‌ಡಿಎ ಮೈತ್ರಿಕೂಟದ ಜೊತೆ ಸೇರುವ ಜೆಡಿಎಸ್ ಪಕ್ಷದ ನಿರ್ಧಾರವನ್ನು ಕೇರಳದಲ್ಲಿನ ಜೆಡಿಎಸ್ ಘಟಕ ಶುಕ್ರವಾರ ಅಧಿಕೃತವಾಗಿ ತಿರಸ್ಕರಿಸಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತೆಗೆದುಕೊಂಡಿರುವ ನಿರ್ಧಾರ ಪಕ್ಷ ಅಳವಡಿಸಿಕೊಂಡಿದ್ದ ರಾಜಕೀಯ ಗೊತ್ತುವಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ಎನ್‌ಡಿಎ ಮೈತ್ರಿಕೂಟ ಸೇರುವ ಕುರಿತಾಗಿ ಕೇರಳ ಜೆಡಿಎಸ್ ನಡೆಸಿದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ, ಶಾಸಕ ಮ್ಯಾಥ್ಯೂ, ‘ಎನ್‌ಡಿಎ ಮೈತ್ರಿಕೂಟವನ್ನು ಸೇರುವ ನಿರ್ಧಾರವನ್ನು ದೇವೇಗೌಡ ಹಾಗೂ ಅವರ ಪುತ್ರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರಷ್ಟೇ ತೆಗೆದುಕೊಂಡಿದ್ದಾರೆ. ಈ ನಿರ್ಧಾರಕ್ಕೆ ಪಕ್ಷದ ಸಂಪೂರ್ಣ ನಾಯಕತ್ವ ಒಪ್ಪಿಗೆ ಸೂಚಿಸಿಲ್ಲ. ಪಕ್ಷ ತೆಗೆದುಕೊಂಡಿರುವ ನಿರ್ಧಾರಕ್ಕೆ ವಿರುದ್ಧವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯಾದ್ರೆ ನಮ್ಮ ಹಕ್ಕು ಬಿಟ್ಟು ಕೊಡುವ ಸಂದರ್ಭ ಬರೋದಿಲ್ಲ: ಸಿ.ಟಿ.ರವಿ
ದೇವೇಗೌಡ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಾಗಲೀ ಅಥವಾ ರಾಷ್ಟ್ರೀಯ ಸಮಿತಿಯಾಗಲೀ ಒಪ್ಪಿಲ್ಲ. ನಾವು ಪಕ್ಷದ ಮೂಲ ಸಿದ್ಧಾಂತಕ್ಕೆ ಬದ್ಧವಾಗಿ ನಡೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದರು. ಕೇರಳ ಜೆಡಿಎಸ್ ಆಡಳಿತರೂಢ ಎಡ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದೆ.