Karnataka Politics: ನಂಬಿದವರು ಕೈಬಿಟ್ಟಾರು: ಸಿದ್ದುಗೆ ಮುನಿಯಪ್ಪ ಎಚ್ಚರಿಕೆ

‘ಕಳೆದ ಬಾರಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ನಂಬಿಕೊಂಡು ಕೋಲಾರಕ್ಕೆ ಬರಬೇಡಿ. ಕೋಲಾರ ಕಾಂಗ್ರೆಸ್‌ನಲ್ಲಿ ಸಮಸ್ಯೆಯಿದೆ, ಸಮಸ್ಯೆ ಸರಿಪಡಿಸಿಕೊಂಡು ಬನ್ನಿ. ಅವರನ್ನು ನಂಬಿಕೊಂಡು ಬಂದರೆ ಗೆಲುವು ಕಷ್ಟವಾಗಬಹುದು’.

KH Muniyappa Talks Over Former CM Siddaramaiah gvd

ಬೆಂಗಳೂರು (ನ.17): ‘ಕಳೆದ ಬಾರಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ನಂಬಿಕೊಂಡು ಕೋಲಾರಕ್ಕೆ ಬರಬೇಡಿ. ಕೋಲಾರ ಕಾಂಗ್ರೆಸ್‌ನಲ್ಲಿ ಸಮಸ್ಯೆಯಿದೆ, ಸಮಸ್ಯೆ ಸರಿಪಡಿಸಿಕೊಂಡು ಬನ್ನಿ. ಅವರನ್ನು ನಂಬಿಕೊಂಡು ಬಂದರೆ ಗೆಲುವು ಕಷ್ಟವಾಗಬಹುದು’. ಹೀಗೆ ಸಿದ್ದರಾಮಯ್ಯ ಅವರಿಗೆ ನಯವಾಗಿ ಎಚ್ಚರಿಕೆ ನೀಡಿದ್ದ ಕೋಲಾರದ ಮಾಜಿ ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋಲಾರ ಕಾಂಗ್ರೆಸ್‌ನಲ್ಲಿ ಸಮಸ್ಯೆಯಿದೆ. ಮೂಲ ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದನ್ನು ಸರಿಪಡಿಸಿಕೊಂಡು ಕೋಲಾರಕ್ಕೆ ಬಂದರೆ ಸ್ಪರ್ಧೆಗೆ ಅನುಕೂಲವಾಗುತ್ತದೆ. ಇಲ್ಲದಿದ್ದರೆ ಕಷ್ಟವಾಗುತ್ತದೆ ಎಂದು ಹೇಳಿದ್ದೇನೆ’ ಎಂದರು.

ಭಿನ್ನಾಭಿಪ್ರಾಯವಿದೆ: ‘ಸಿದ್ದರಾಮಯ್ಯ ಅವರನ್ನು ಸೋಲಿಸಲು ಸಂಚು ಮಾಡುತ್ತಿಲ್ಲ. ಆದರೆ ಸ್ವಲ್ಪ ಭಿನ್ನಾಭಿಪ್ರಾಯ ಇದೆ. ಪಕ್ಷಕ್ಕೆ ಪ್ರಾಮಾಣಿಕವಾಗಿರುವವರಿಗೆ ಮನ್ನಣೆ ನೀಡಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೋಗಬೇಕು. ಅದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಮಾಡುತ್ತಾರೆ ಎಂಬ ವಿಶ್ವಾಸವಿದೆ ’ಎಂದು ಹೇಳಿದರು. ಇನ್ನು ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಗೈರಾಗಿದ್ದ ಬಗ್ಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದಿದ್ದಾಗ ನನಗೆ ಗುಜರಾತ್‌ನಲ್ಲಿ ಚುನಾವಣೆ ಕೆಲಸ ಇತ್ತು. ಆಗ ದೂರವಾಣಿಯಲ್ಲಿ ಸಿದ್ದರಾಮಯ್ಯ ಅವರ ಜತೆ ಮಾತನಾಡಿದ್ದೇನೆ. ಅವರನ್ನು ಸ್ವಾಗತ ಮಾಡಿದ್ದೇನೆ. ಎಲ್ಲವನ್ನೂ ವಿವರಿಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವಂತೆ ತಿಳಿಸಿದ್ದೇನೆ’ ಎಂದರು.

ಬಡತನ ವಿರುದ್ಧ ತಂತ್ರಜ್ಞಾನದ ಅಸ್ತ್ರ: ಪ್ರಧಾನಿ ಮೋದಿ

ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಅಖಾಡಕ್ಕೆ?: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಅವರು ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವ ಸಂಭವ ಇದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಸ್ಥಳೀಯ ಕಾಂಗ್ರೆಸ್ಸಿಗರ ಒತ್ತಾಯವಿದೆ. ಹೀಗಾಗಿ ನೆರೆ ಜಿಲ್ಲೆಯವರಾದ ಹಾಗೂ ಸಮುದಾಯದ ಮತ, ವೈಯಕ್ತಿಕ ವರ್ಚಸ್ಸನ್ನೂ ಹೊಂದಿರುವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿಯಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ಇದಕ್ಕೆ ಹೈಕಮಾಂಡ್‌ ಸಹ ಪೂರಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ದೇವನಹಳ್ಳಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮುನಿಯಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಕಲಿಯಲು ರಾಜ್ಯದ ಸರ್ಕಾರಿ ಶಾಲೆಗೆ ತಮಿಳುನಾಡು ಮಕ್ಕಳು!

ಈ ಕ್ಷೇತ್ರದಲ್ಲಿ 2008ರ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿಲ್ಲ. 2008ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ವೆಂಕಟಸ್ವಾಮಿ ಅವರಿಗೆ 2013 ಹಾಗೂ 18ರಲ್ಲಿ ಅವಕಾಶ ನೀಡಿದ್ದರೂ ಗೆಲುವು ಸಾಧಿಸಿಲ್ಲ. ಹೀಗಾಗಿ ಎರಡೂ ಬಾರಿ ಜೆಡಿಎಸ್‌ ಗೆಲುವು ಸಾಧಿಸಿತ್ತು. 2018ಕ್ಕೆ ಹೋಲಿಸಿದರೆ ಕ್ಷೇತ್ರದ ಸನ್ನಿವೇಶ ಸಂಪೂರ್ಣವಾಗಿ ಬದಲಾಗಿದೆ. ಹೀಗಾಗಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಕೆ.ಎಚ್‌.ಮುನಿಯಪ್ಪ ಅವರ ಸಮುದಾಯದ ಮತಗಳು ದೇವನಹಳ್ಳಿಯಲ್ಲಿ ಹೆಚ್ಚಿವೆ. ಜತೆಗೆ ಹಿರಿಯ ನಾಯಕರಾಗಿದ್ದು ಹಲವು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ ಅವರು ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ. ಹೀಗಾಗಿ ಅವರೇ ಸ್ಪರ್ಧಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ.

Latest Videos
Follow Us:
Download App:
  • android
  • ios