ಬೆಳಗಾವಿ, (ಸೆ.02) : ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್, ಹೋಂ ಐಸೋಲೇಷನ್ ಒಳಗಾಗಿದ್ದಾರೆ. 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೂ ಕೊರೋನಾ: ಆಸ್ಪತ್ರೆಗೆ ದಾಖಲು

ಕೋವಿಡ್ 19 ಪರೀಕ್ಷೆ ಮಾಡಿಸಿದ್ದು, ನನಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಗೆ ಒಳಗಾಗಿದ್ದೇನೆ. ಮನೆಯಿಂದಲೇ ಕೆಲಸಗಳನ್ನು ಮಾಡಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಅಂಜಲಿ ನಿಂಬಾಳ್ಕರ್ ಅವರು ಆಗಸ್ಟ್ 26 ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ, ವರದಿಯಲ್ಲಿ ನೆಗೆಟಿವ್ ಬಂದಿತ್ತು. ಆದ್ರೆ, ಇಂದು (ಸೆ.02) ಪಾಸಿಟಿವ್ ಬಂದಿದೆ.