ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಶುಕ್ರವಾರ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಖುದ್ದು ಹಾಜರಿದ್ದು, ಮುಖ್ಯಮಂತ್ರಿ ಮತ್ತು ಮಾಜಿ ಸಿಎಂ ಕೂಡ ಸಾಥ್ ನೀಡಲಿದ್ದಾರೆ
- ಉಮೇದುವಾರಿಕೆ - ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿರುವ ಎಐಸಿಸಿ ಅಧ್ಯಕ್ಷ
- - ಮಧ್ಯಾಹ್ನ 1.30ಕ್ಕೆ ಸಲ್ಲಿಕೆ । ಸಿಎಂ ಡಿಕೆಶಿ, ಮಾಜಿ ಸಿಎಂ ಸಿದ್ದು ಸಾಥ್?
ಬೆಂಗಳೂರು (ಜೂ.5): ರಾಜ್ಯದಿಂದ ರಾಜ್ಯಸಭೆ ಚುನಾವಣೆ(Rajyasabha Election)ಗೆ ಸ್ಪರ್ಧಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun kharge)ಅವರು ಶುಕ್ರವಾರ ಮಧ್ಯಾಹ್ನ ವಿಧಾನಸೌಧ(Vidhan soudha)ದಲ್ಲಿ ನಾಮಪತ್ರ ಸಲ್ಲಿಸಲಿದ್ದು, ಖುದ್ದು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಆಯ್ಕೆಯಾಗಲಿದ್ದು, ಸಂಖ್ಯಾಬಲದಂತೆ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಬಹುದಾಗಿದೆ. ಕಾಂಗ್ರೆಸ್‌ನ ಮೂರು ಸ್ಥಾನದ ಪೈಕಿ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಅಂತಿಮವಾಗಿದ್ದು, ಅವರು ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿರುವ ಸಲುವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ವಿಧಾನಸೌಧಕ್ಕೆ ಆಗಮಿಸಿ, ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇನ್ನಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಗಳಿವೆ.


