ರೈತರ ಖಾತೆಗೆ ನೇರವಾಗಿ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
ಫೆ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ಬೆಳಗಾವಿ (ಫೆ.23): ಫೆ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಮಂತ್ರಿ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು.
ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು. ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ಮೊದಲ ಬಾರಿಗೆ ಕರ್ನಾಟಕದಿಂದ ರೈತ ಕಿಸಾನ್ ಸಮ್ಮಾನ್ ಯೋಜನೆ ನಿಧಿ ರೈತ ಖಾತೆಗೆ ಹಾಕಲಿದ್ದಾರೆ. ಕಳೆದ ಬಾರಿ ದೆಹಲಿ ಗ್ರಾಮೀಣ ಪ್ರದೇಶದಿಂದ ರೈತರ ಖಾತೆಗೆ 22 ಸಾವಿರ ಕೋಟಿ ಹಣವನ್ನ ಹಾಕಿದ್ರು. ಇವತ್ತು ಕರ್ನಾಟಕದಿಂದ 14 ಕೋಟಿ ರೈತರ ಖಾತೆಗೆ 2 ಲಕ್ಷ 70 ಸಾವಿರ ಕೋಟಿ ಹಣ ಹಾಕಲಿದ್ದಾರೆ.
ರಾಜಕೀಯ ಪಕ್ಷಗಳಿಗೆ ದೇಶದ ನಿಜವಾದ ಬಡತನದ ಬಗ್ಗೆ ಅರಿವಿಲ್ಲ: ಎಚ್.ಡಿ.ಕುಮಾರಸ್ವಾಮಿ
ಪ್ರತಿ ಮೂರು ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 6 ಸಾವಿರ ರೂ. ಹಾಕುತ್ತಿದ್ದೇವೆ. ಈ ಬಾರಿ ಯಡಿಯೂರಪ್ಪನವರ ಜನ್ಮದಿನದಂದು ರೈತರ ಖಾತೆಗೆ ಹಣ ಹಾಕುತ್ತಿರುವುದು ಖುಷಿ ತಂದಿದೆ. ಮೋದಿ ಕಾರ್ಯಕ್ರಮ ಯಶಸ್ವಿ ಮಾಡಲು ಶಾಸಕರು, ಸಂಸದರು ಶ್ರಮಿಸುತ್ತಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದ ಪೂರ್ವ ತಯಾರಿ ನಡೆಯುತ್ತಿದೆ. ಫೆ.27 ರ ಬೆಳಗ್ಗೆ ಶಿವಮೊಗ್ಗ ಏರ್‌ಪೋರ್ಟ್ ದೇಶಕ್ಕೆ ಸಮರ್ಪಿಸಿ ಬೆಳಗಾವಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ: ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಭದ್ರತೆ ಹಾಗೂ ಶಿಷ್ಟಾಚಾರದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ದೊಡ್ಡ ಸಂಖ್ಯೆಯಲ್ಲಿ ರೈತರು, ರೈತ ಮಹಿಳೆಯರು ಬರ್ತಾರೆ ಎಂದು ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆತಂದು ವಾಪಸ್ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು. ಪಶುಸಂಗೋಪನೆ ಸೇರಿ ಕೃಷಿ ಕೆಲಸವನ್ನ ಮಹಿಳೆಯರು ಹೆಚ್ಚಾಗಿ ಮಾಡ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತ ಮಹಿಳೆಯರನ್ನ ಸೇರಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆ ರೈತರನ್ನ ಸೇರಿಸುವುದು ನಮ್ಮ ಮೊದಲ ಟಾರ್ಗೆಟ್.
ಡಬಲ್ ಎಂಜಿನ್ ಸರ್ಕಾರ ಇರುವ ಕಡೆಯೆಲ್ಲಾ ಅಭಿವೃದ್ಧಿ: ಸಂಸದ ತೇಜಸ್ವಿ ಸೂರ್ಯ
ಅದರೊಂದಿಗೆ ಅಕ್ಕ ಪಕ್ಕದ ಜಿಲ್ಲೆಯಿಂದ ರೈತರು, ಜನರು ಬರ್ತಾರೆ. ವೇದಿಕೆ ಮೇಲೆ ಯಾರು ಇರ್ತಾರೆ ಅನ್ನೋದು ಪಿಎಂ ಕಚೇರಿಯಿಂದ ಅಂತಿಮ ಆಗುತ್ತದೆ. ನನಗೆ ವಿಶ್ವಾಸವಿದೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಇರ್ತಾರೆ. ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದರಿಂದ ಶಾಸಕರು, ಸಂಸದರ ಹೆಸರಿನ ಪಟ್ಟಿ ಕಳುಹಿಸಲಾಗಿದೆ. ಪ್ರಧಾನಮಂತ್ರಿಗಳು ಸಂಚರಿಸಲಿರುವ ಮಾರ್ಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ದುರಸ್ತಿ ಅಥವಾ ನಿರ್ಮಾಣ ಕಾಮಗಾರಿ ನಡೆಸಬೇಕು. ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸ್ಥಳಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವನ್ನು ನಿಯೋಜಿಸಬೇಕು.