Breaking: Dysp ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವಗೆ ಬಿಗ್ ರಿಲೀಫ್

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸೇರಿದಂತೆ ಇಬ್ಬುರ ಐಪಿಎಸ್‌ ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.

KJ george and tw0 IPS Officers relaxed from High Court In DySP Ganapathi suicide Case rbj

ಬೆಂಗಳೂರು, (ನ.04): ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಸಿಬಿಐನ ಬಿ-ರಿಪೋರ್ಟ್ ಎತ್ತಿಹಿಡಿದೆ. ಈ ಹಿನ್ನೆಲೆಯಲ್ಲಿ  ಮಾಜಿ ಸಚಿವ ಕೆ.ಜೆ. ಜಾರ್ಜ್, ಪ್ರಣವ್ ಮೊಹಾಂತಿ, ಎಂಎನ್ ಪ್ರಸಾದ್ ನಿಟ್ಟುಸಿರುಬಿಡುವಂತಾಗಿದೆ.

2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಈ ಮೂವರಿಗೆ ಸಮನ್ಸ್ ನೀಡಿತ್ತು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಕೆಜೆ ಜಾರ್ಜ್‌ಗೆ ಮತ್ತೆ ಸಂಕಷ್ಟ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್, ಸಿಬಿಐ ಹಾಕಿದ್ದ ಬಿ-ರಿಪೋರ್ಟ್ ಎತ್ತಿಹಿಡಿದೆ.

ಪ್ರಕರಣದ ತನಿಖೆ ನಡೆಸಿ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಮೃತ ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಮತ್ತು ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ‘ಬಿ’ ರಿಪೋರ್ಟ್‌ ರದ್ದುಪಡಿಸಿ, ಪ್ರಕರಣದ ಮರು ತನಿಖೆಗೆ ಸೂಚಿಸಿತ್ತು.

Latest Videos
Follow Us:
Download App:
  • android
  • ios