ಜೆಡಿಎಸ್‌ ಜೊತೆ ಮೈತ್ರಿಯಾದರೆ ಕೋಲಾರ ಕ್ಷೇತ್ರ ಬಿಟ್ಟು ಕೊಡುವೆ: ಮುನಿಸ್ವಾಮಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ನಡುವೆ ಮೈತ್ರಿಯಾದರೆ ಒಳ್ಳೆಯದು. ಆದರೆ, ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ. ದೇಶದ ಭವಿಷ್ಯಕ್ಕಾಗಿ ನಾನು ಸಂಸದ ಸ್ಥಾನ ಬಿಟ್ಟು ಕೊಡಲು ಸಿದ್ಧ: ಸಂಸದ ಎಸ್‌.ಮುನಿಸ್ವಾಮಿ 

Kolar Constituency will be given up if Alliance with JDS Says BJP MP S Muniswamy grg

ಕೋಲಾರ(ಸೆ.09): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಏರ್ಪಟ್ಟರೆ, ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ನಡುವೆ ಮೈತ್ರಿಯಾದರೆ ಒಳ್ಳೆಯದು. ಆದರೆ, ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ. ದೇಶದ ಭವಿಷ್ಯಕ್ಕಾಗಿ ನಾನು ಸಂಸದ ಸ್ಥಾನ ಬಿಟ್ಟು ಕೊಡಲು ಸಿದ್ಧ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಪಕ್ಷ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ನನಗಿದೆ. ನಾನು ಸೀಟು ಬಿಟ್ಟು ಕೊಡುವ ವಿಚಾರಕ್ಕೆ ಹತಾಶನಾಗುವುದಿಲ್ಲ. ಆದರೆ, ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಇದುವರೆಗೂ ಪಕ್ಷದಲ್ಲಿ ಯಾವುದೇ ತೀರ್ಮಾನವಾಗಿಲ್ಲ ಎಂದರು.

ಕೋಲಾರ ಭಾಗದ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ 500 ಕೋಟಿ: ಸಂಸದ ಮುನಿಸ್ವಾಮಿ

ಸೆ.16ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಬಸವರಾಜ ಬೊಮ್ಮಾಯಿಯವರು ಕುರುಡುಮಲೆ ಗಣೇಶನ ದೇವಸ್ಥಾನಕ್ಕೆ ಬರಲಿದ್ದಾರೆ. ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಯಡಿಯೂರಪ್ಪ ಈ ಹಿಂದೆ ಚುನಾವಣಾ ಪ್ರಚಾರ ಪ್ರಾರಂಭಿಸಿದಾಗ ಕುರುಡುಮಲೆ ಗಣಪನಿಗೆ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ 28 ಸ್ಥಾನ ಗೆಲ್ಲಲಿದೆ. ವಿಧಾನಸಭೆಯ ಸೋಲಿನ ಕಹಿ ಮರೆತು ಕಾಂಗ್ರೆಸ್‌ನ್ನು ಸೋಲಿಸುವ ಕೆಲಸ ಆರಂಭ ಮಾಡುತ್ತೇವೆ ಎಂದರು. 

Latest Videos
Follow Us:
Download App:
  • android
  • ios