* ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ* ಇಂದು (ಸೆ.15) ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಶ್ರೀನಿವಾಸ್ ಗೌಡ* ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಭೇಟಿ

ಬೆಂಗಳೂರು, (ಸೆ.15): ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Add Asianetnews Kannada as a Preferred SourcegooglePreferred

ಹೌದು.. ಇಂದು (ಸೆ.15) ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರನ್ನ ಭೇಟಿ ಮಾಡಿ ಒಂದು ಗಂಟೆ ಕಾಲ ರಹಸ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ದೇವೇಗೌಡ ಖಡಕ್ ಸೂಚನೆ: ಪಕ್ಷದಿಂದ ಉಚ್ಛಾಟನೆ ಆಗ್ತಾರಾ ಜೆಡಿಎಸ್ ಶಾಸಕ?

ಶ್ರೀನಿವಾಸ್ ಗೌಡ ವಿರುದ್ಧ ಕ್ರಮಕೈಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ ಬೆನ್ನಲ್ಲೇ ದಿಢೀರ್ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಈಗಾಗಲೇ ಪಕ್ಷದ ವರಿಷ್ಠರ ವಿರುದ್ಧ ಶ್ರೀನಿವಾಸ್ ಗೌಡ ತಿರುಗಿಬಿದ್ದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದರಿಂದ ದೇವೇಗೌಡ್ರು ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು.

ಇದರ ಬೆನ್ನಲ್ಲೇ ಡಿಕೆಶಿ ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.