ಚುನಾವಣೆ ಸಮೀಪದಲ್ಲಿದೆ. ಇತ್ತ ಆಪರೇಶನ್‌ಗಳು ಜೋರಾಗುತ್ತಿದೆ. ಹಲವು ನಾಯಕರು ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಮಾತನಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಲಿ ಶಾಸಕ ಬಿಜೆಪಿಗೆ ರಾಜೀನಾಮೆ ನೀಡಿ ಶಾಕ್ ಕೊಟ್ಟಿದ್ದಾರೆ.
ಭೋಪಾಲ್(ಆ.31) ಲೋಕಸಭಾ ಚುನಾವಣೆ, 5 ರಾಜ್ಯಗಳ ವಿಧಾನಸಭಾ ಚುನಾವಣೆ ಆಗಮಿಸುತ್ತಿದೆ. ಇತ್ತ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿದೆ. ಇದಕ್ಕಾಗಿ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ರಹಸ್ಯ ಆಪರೇಶನ್ ಆರಂಭಿಸಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿಗೆ ಶಾಕ್ ಎದುರಾಗಿದೆ. ಕೋಲಾರಸ್ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಬ್ರಿಜೇಂದ್ರ ಸಿಂಗ್ ರಘುವಂಶಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಕಾರ್ಯಕಾರಣಿ ಸಮಿತಿಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.
ಭಾರವಾದ ಹೃದಯಗಳೊಂದಿಗೆ ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಕಳೆದ 5 ವರ್ಷಗಳಿಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್‌ಗೆ ಕೆಲ ಪ್ರಮುಖ ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದೇನೆ. ಸಮಸ್ಯೆಗಳನ್ನು ಹೇಳಿಕೊಂಡಿದ್ದೇನೆ. ಪರಿಹಾರ ಸೂಚಿಸುವ ಭರವಸೆ ನೀಡಿದ್ದಾರೆ. ಆದರೆ ಇದುವರೆಗೂ ನನ್ನ ಸಮಸ್ಯೆಗೆ ಸ್ಪಂದಿಸಿಲ್ಲ ಎಂದು ಭ್ರಿಜೇಂದ್ರ ಸಿಂಗ್ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿ ಗಾಸಿಪ್ ಕೇಂದ್ರ ಅಲ್ಲ: ರೇಣುಗೆ ಯತ್ನಾಳ್ ತಿರುಗೇಟು
ಜ್ಯೋತಿರಾಧಿತ್ಯ ಸಿಂದಿಯಾ ಬಿಜೆಪಿ ಸೇರಿಕೊಂಡು ಇದೀಗ ಕೇಂದ್ರ ಮಂತ್ರಿಯಾಗಿದ್ದಾರೆ. ಸಿಂಧಿಯಾ ಬಿಜೆಪಿ ಸೇರಿಕೊಂಡ ಬಳಿಕ ತನನ್ನು ಕಡೆಗಣಿಸಿದ್ದಾರೆ. ಕ್ಷೇತ್ರದ ಶಾಸಕನಾಗಿದ್ದರೂ ಸಿಂಧಿಯಾ ಮಾತಿಗೆ ಬೆಲೆ ಕೊಡುತ್ತಿದ್ದಾರೆ ಎಂದು ಭ್ರಿಜೇಂದ್ರ ಸಿಂಗ್ ಆರೋಪಿಸಿದ್ದಾರೆ. ಶಿವಪುರಿ ಜಿಲ್ಲೆಯಲ್ಲಿ ಭ್ರಷ್ಟರ ಅಧಿಕಾರಿಗಳನ್ನು ನೇಮಿಸಿದ್ದಾರೆ. ಸಿಂಧಿಯಾ ಹಾಗೂ ಬಿಜೆಪಿ ವರಿಷ್ಠರ ಮಾತುಗಳಿಗೆ ಬೆಲೆಕೊಡುತ್ತಾರೆ. ನಮ್ಮ ಯಾವುದೇ ಕೆಲಸಗಳಿಗೆ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದ್ದಾರೆ.
ರೈತರಿಗೆ ಕಾಂಗ್ರೆಸ್ ಬೆಲೆ ಕೊಡುತ್ತಿಲ್ಲ. ರೈತರಿಗೆ ನೀಡಿದ್ದ ಭರವಸೆ ಕಾಂಗ್ರೆಸ್ ಈಡೇರಿಸಿಲ್ಲ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬಳಿಕ ಸಿಂಧಿಯಾ ರೈತರ ಬಗ್ಗೆ ಒಂದು ಮಾತು ಆಡುತ್ತಿಲ್ಲ. ಇತ್ತ ನಾವು ರೈತರಿಗೆ ನೆರವು ನೀಡಲು, ಅವರ ಸಮಸ್ಯೆ ಕೇಳಲು ಅವಕಾಶ ನೀಡುತ್ತಿಲ್ಲ ಎಂದು ಭ್ರಿಜೇಂದ್ರ ಸಿಂಗ್ ಆರೋಪಿಸಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲೇ ಬಿಜೆಪಿಗೆ ಹಲವು ಸವಾಲು ಎದುರಾಗಿದೆ. ಇದರ ನಡುವೆ ನಾಯಕರು ರಾಜೀನಾಮೆ ನೀಡುತ್ತಿರುವುದು ಸಂಕಷ್ಟ ಮತ್ತಷ್ಟು ಹೆಚ್ಚಿಸಿದೆ.
ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದ್ದು, ನನ್ನನ್ನು ಕಳಿಸಲು ಷಡ್ಯಂತ್ರ: ಸೋಮಶೇಖರ್
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಭ್ರಿಜೇಂದ್ರ ಸಿಂಗ್ ನಿರಾಸೆಯಾಗಿದ್ದರು. ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಜಾತಿ, ಕ್ಷೇತ್ರ ಲೆಕ್ಕಾಚಾರ ಹಾಗೂ ಅಸಮಾಧಾನ ಶಮನಕ್ಕಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಇದರಿಂದ 35ರಲ್ಲಿ 34 ಸಚಿವ ಸ್ಥಾನ ಭರ್ತಿ ಮಾಡಾಲಾಗಿತ್ತು. ರಾಜೇಂದ್ರ ಶುಕ್ಲಾ, ಗೌರಿಶಂಕರ್ ಬಿಸೆನ್ ಹಾಗೂ ರಾಹುಲ್ ಲೋಧಿಗೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
