Asianet Suvarna News Asianet Suvarna News

ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆ

ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಿ ನೇಮಿಸಲಾಗಿದೆ.  

Kota Srinivas Poojary elected as Opposition Leader of karnataka legislative council gow
Author
First Published Dec 25, 2023, 2:54 PM IST

ಬೆಂಗಳೂರು (ಡಿ.25): ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಆರು ತಿಂಗಳ ನಂತರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಆಯ್ಕೆ ಮಾಡಿತ್ತು. ಬಳಿಕ ವಿಧಾನ ಸಭೆಗೆ ವಿರೋಧ ಪಕ್ಷದ ನಾಯಕನನ್ನಾಗಿ ಆರ್‌ ಅಶೋಕ್‌ ಅವನ್ನು ಆಯ್ಕೆ ಮಾಡಿತ್ತು.

ಇದೀಗ ವಿಧಾನ ಪರಿಷತ್ ಗೆ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಿ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯಂತೆ ಈ ಆಯ್ಕೆ ನಡೆದಿದ್ದು, ಜೊತೆಗೆ ಬಿಜೆಪಿಗೆ ಹಲವು ನಾಯಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ. ಕೋಟಾ ಬಿಜೆಪಿಯ ಹಿರಿಯ ನಾಯಕರಾಗಿದ್ದು, ಸರಕಾರದ ವಿವಿಧ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. 2009 ರಲ್ಲಿ, ಅವರು ಮೊದಲ ಬಾರಿಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಹಲವು ಕಾರ್ಯಗಳನ್ನು ಮಾಡಿದ್ದಾರೆ.

ಇನ್ನುಳಿದಂತೆ ಸುನೀಲ್ ವಲ್ಯಾಪುರೆ ಅವರನ್ನು ಪರಿಷತ್ ಉಪನಾಯಕನನ್ನಾಗಿ ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಕೆಳಮನೆಯ ಉಪನಾಯಕ, ರವಿಕುಮಾರ್ ಪರಿಷತ್ ಸಚೇತಕ, ದೊಡ್ಡನಗೌಡ ಜಿ ಪಾಟೀಲ್  ಕೆಳಮನೆಯ ಸಚೇತಕ ನನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ.

Follow Us:
Download App:
  • android
  • ios