ಜೆಡಿಎಸ್‌ ಕಡೆಗಣಿಸುವ ಪಕ್ಷ ಅಲ್ಲ, ಮೈತ್ರಿ ಅನಿವಾರ್ಯ: ಕೋಟ ಶ್ರೀನಿವಾಸ ಪೂಜಾರಿ

ರಾಷ್ಟ್ರೀಯ ವಿಚಾರಕ್ಕಾಗಿ ಕೆಲವೊಂದು ಸಾರಿ ಹೊಂದಾಣಿಕೆ ಮತ್ತು ಮೈತ್ರಿ ಅನಿವಾರ್ಯವಾಗುತ್ತದೆ. ಹೀಗಾಗಿ, ಜೆಡಿಎಸ್‌ನೊಂದಿಗೆ ಬಿಜೆಪಿ ಮನಪೂರ್ವಕ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Kota Srinivas Poojary Reaction On BJP JDS Alliance gvd

ಕೊಪ್ಪಳ (ಸೆ.24): ರಾಷ್ಟ್ರೀಯ ವಿಚಾರಕ್ಕಾಗಿ ಕೆಲವೊಂದು ಸಾರಿ ಹೊಂದಾಣಿಕೆ ಮತ್ತು ಮೈತ್ರಿ ಅನಿವಾರ್ಯವಾಗುತ್ತದೆ. ಹೀಗಾಗಿ, ಜೆಡಿಎಸ್‌ನೊಂದಿಗೆ ಬಿಜೆಪಿ ಮನಪೂರ್ವಕ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಕೆಲವೊಮ್ಮೆ ಅನಿವಾರ್ಯತೆಗಳು ಸೃಷ್ಟಿಯಾಗುತ್ತವೆ. 

ಹೀಗಾಗಿ, ಅಂಥ ಸಂದರ್ಭದಲ್ಲಿ ರಾಷ್ಟ್ರೀಯತೆ ಗಮನದಲ್ಲಿಟ್ಟುಕೊಂಡು ಇಂತಹ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹೊಸದಾಗಿ ಏನೂ ಅಲ್ಲ. ಈ ಹಿಂದೆ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ಮಾಡಿದ್ದೇವೆ. ಅಷ್ಟಕ್ಕೂ ಜೆಡಿಎಸ್ ಕಡೆಗಣಿಸುವ ಪಕ್ಷ ಅಲ್ಲ. ರಾಜ್ಯದಲ್ಲಿ ಗಟ್ಟಿನೆಲೆ ಇದೆ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಶಕ್ತಿ ಗಟ್ಟಿಗೊಳಿಸಲು ರಾಷ್ಟ್ರೀಯ ನಾಯಕರು ಜೆಡಿಎಸ್ ನೊಂದಿಗೆ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದರು. ರಾಜ್ಯ ಸರ್ಕಾರ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. 

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯ: ವೀರಪ್ಪ ಮೊಯಿಲಿ

ಸುಪ್ರೀಂ ಕೋರ್ಟಿನಲ್ಲಿ ಸಮರ್ಥ ವಾದ ಮಾಡುವುದನ್ನು ಬಿಟ್ಟು, ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ ಎಂದರು. ಪ್ರಧಾನಿಯನ್ನು ಕಾವೇರಿ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳುವುದು ಸರಿಯಲ್ಲ. ಅದನ್ನು ಬಿಟ್ಟು ಸುಪ್ರೀಂ ಕೋರ್ಟಿನಲ್ಲಿ ಮನವರಿಕೆ ಮಾಡಿಕೊಡಲಿ ಎಂದರು. ಕಾಂಗ್ರೆಸ್‌ ಸರ್ಕಾರ ಮೂರು ಉಪ ಮುಖ್ಯಮಂತ್ರಿಯನ್ನಾದರು ಮಾಡಿಕೊಳ್ಳಲಿ, ಆರು ಉಪಮುಖ್ಯಮಂತ್ರಿಯನ್ನಾದರೂ ಮಾಡಿಕೊಳ್ಳಿ, ಅದು ನಮಗೆ ಬೇಕಾಗಿಲ್ಲ. ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಬರುವುದನ್ನು ಮೊದಲು ಮಾಡಲಿ ಎಂದರು.

ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರ್ಪಡೆಗೆ ಜಿ.ಟಿ.ಡಿ ಸ್ವಾಗತ: ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಲು ತೀರ್ಮಾನಿಸಿರುವುದನ್ನು ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ವಾಗತಿಸಿದ್ದಾರೆ. ಈ ಮೈತ್ರಿಯಿಂದ ಎರಡೂ (ಬಿಜೆಪಿ ಮತ್ತು ಜೆಡಿಎಸ್) ಪಕ್ಷಗಳಿಗೆ ಶಕ್ತಿ ಬರಲಿದೆ. ದೇಶದ ಪ್ರಧಾನಿ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಟ್ಟಿಗೆ ಕುಳಿತು ದೇಶದ ಹಿತಾಸಕ್ತಿ, ರಾಜ್ಯದ ಗಮನವನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿದ್ದರು. 

ಅಮಿತ್‌ ಶಾ ಜತೆ ಎಚ್‌ಡಿಕೆ ಆಡಿದ ಕಾವೇರಿ ನುಡಿಮುತ್ತು ಏನೆಂದು ಹೇಳಲಿ: ಡಿಕೆಶಿ

ದೇಶದ ಹಿತಕ್ಕಾಗಿ ಜೆಡಿಎಸ್ ಎನ್‌ಡಿಎ ಭಾಗವಾಗಬೇಕೆಂದು ಕೋರಿದ್ದರ ಪರಿಣಾಮವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಎನ್ ಡಿಎ ಭಾಗವಾಗಿ ಇರಲು ತೀರ್ಮಾನ ಮಾಡಿರುವುದು ಒಳ್ಳೆಯ ತೀರ್ಮಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios