* ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಕೇಸ್ ಹಿಂಪಡೆಯುವಂತೆ ಮನವಿ* ಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ* ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಪತ್ರ ನೀಡಿದ ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು, (ಆ.09): ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಇಂದು (ಸೋಮವಾರ) ಕೋಟ ಶ್ರೀನಿವಾಸ ಪೂಜಾರಿ ಅವರು ಖುದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಪತ್ರ ನೀಡಿ ಚರ್ಚಿಸಿದರು.
ಝೀರೋ ಟ್ರಾಫಿಕ್ ಬೇಡವೆಂದ ಗೃಹ ಸಚಿವ ಜ್ಞಾನೇಂದ್ರ
ರಾಜ್ಯಾದಾದ್ಯಂತ ಅನೇಕ ಕಡೆಗಳಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ದುರುದ್ದೇಶದಿಂದ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಮಾಡಿದರು.
ಶ್ರೀನಿವಾಸ್ ಪೂಜಾರಿ ಪತ್ರದಲ್ಲೇನಿದೆ?
ಕರವಾಳಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದಾದ್ಯಂತ ಅನೇಕ ಕಡೆಗಳಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಗುರಿಯಾಗಿಸಿಕೊಂಡು ಸಮಾಜದ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಸೇರಿ ದುರುದ್ದೇಶದಿಂದ ಸುಳ್ಳು ಪ್ರಕರಣಗಳು ದಾಖಲಾಗಿರುತ್ತವೆ. ಈ ರೀತಿಯ ದುರುದ್ದೇಶದ ಪ್ರಕರಣಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರು ಮನವಿ ಸಲ್ಲಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶದಿಂದ ದಾಖಲಿಸಲಾಗಿರುವ ಮೊಕದ್ದಮೆಗಳನ್ನ ಹಿಂಪಡೆಯುವಂತೆ ಕೋರುತ್ತೇನೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಅವರು ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದಿದ್ದಾರೆ.
