Asianet Suvarna News Asianet Suvarna News

ಮುನಿರತ್ನ ಮೋಸ ಮಾಡಿದ್ದಾರೆಂದು ಜನರಿಗೆ ಬೇಸರ, ಮತ, ಸ್ಥಾನ ಮಾರಿಕೊಂಡವರಿಗೆ ತಕ್ಕ ಉತ್ತರ’

ಕಾಂಗ್ರೆಸ್‌ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿದ್ಯಾವಂತ ಹೆಣ್ಣುಮಗಳು| ಕುಸುಮಾ ತಂದೆ ಹನುಮಂತರಾಯಪ್ಪ ಕೂಡ ಈ ಕ್ಷೇತ್ರದಲ್ಲಿ ಹಿಂದೆ ನಗರಸಭೆ ಅಧ್ಯಕ್ಷರಾಗಿದ್ದವರು, ಹಾಗಾಗಿ ಕುಸುಮಾ ಅವರಿಗೆ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ|  ಕುಸುಮಾ ಅವರನ್ನ ಗೆಲ್ಲಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ: ಡಿಕೆಶಿ| 

KPCC President D K Shivakumar Slams on Muniratna grg
Author
Bengaluru, First Published Oct 18, 2020, 9:46 AM IST
  • Facebook
  • Twitter
  • Whatsapp

ಬೆಂಗಳೂರು(ಅ.18): ರಾಜರಾಜೇಶ್ವರಿ ನಗರದಲ್ಲಿ ಕಳೆದ ಚುನಾವಣೆಯಲ್ಲಿ ಗೆಲ್ಲಿಸಿದ್ದ ಅಭ್ಯರ್ಥಿ ಪಕ್ಷಾಂತರದ ಮೂಲಕ ತಾವು ನೀಡಿದ್ದ ಮತಗಳು ಹಾಗೂ ಸ್ಥಾನವನ್ನು ಮಾರಿಕೊಂಡಿದ್ದಾರೆ ಎಂದು ಕ್ಷೇತ್ರದ ಮತದಾರರು ಬೇಸರಗೊಂಡಿದ್ದು, ಈ ಉಪಚುನಾವಣೆಯಲ್ಲಿ ಆ ಅಭ್ಯರ್ಥಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಟಾಂಗ್‌ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣಾ ವೀಕ್ಷಕರು ಮತ್ತು ಉಸ್ತುವಾರಿಗಳ ಸಭೆ ನಡೆಸಿ ಉಪಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು. ಯಾವುದೇ ಕಾರಣಕ್ಕೂ ಕ್ಷೇತ್ರ ಕಾಂಗ್ರೆಸ್‌ನಿಂದ ಕೈತಪ್ಪದಂತೆ ಪ್ರತಿಯೊಬ್ಬ ಮುಖಂಡ, ಕಾರ್ಯಕರ್ತರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹಿಂದೆ ತಾವು ಗೆಲ್ಲಿಸಿದ್ದ ಅಭ್ಯರ್ಥಿ ನಮ್ಮ ಮತಗಳು, ಸ್ಥಾನ ಎಲ್ಲವನ್ನೂ ಮಾಡಿಕೊಂಡಿದ್ದಾರೆ ಎಂದು ಮತದಾರರಲ್ಲಿ ನೋವು, ಬೇಸರ ಕಾಡುತ್ತಿದೆ. ತಮ್ಮ ವಿಶ್ವಾಸಕ್ಕೆ ಮೋಸ ಮಾಡಿದವರಿಗೆ ಈ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲು ಮತದಾರರು ನಿರ್ಧರಿಸಿದ್ದಾರೆ. ನಾವು ಪ್ರಚಾರಕ್ಕೆ ಹೋದಾಗ ಮತದಾರರೇ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಇದೆ. ನಮ್ಮ ಪಕ್ಷದ ಅಭ್ಯರ್ಥಿಗೆ ಆಶೀರ್ವಾದ ಮಾಡುವುದು ಖಚಿತ. ನಮ್ಮ ಕಾರ್ಯಕರ್ತರಿಗೆ ಪಕ್ಷದ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ಮೂಡಿದೆ ಎಂದರು.

ಕಾಂಗ್ರೆಸ್‌ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ವಿದ್ಯಾವಂತ ಹೆಣ್ಣುಮಗಳು. ಅವರ ತಂದೆ ಹನುಮಂತರಾಯಪ್ಪ ಅವರು ಕೂಡ ಈ ಕ್ಷೇತ್ರದಲ್ಲಿ ಹಿಂದೆ ನಗರಸಭೆ ಅಧ್ಯಕ್ಷರಾಗಿದ್ದವರು. ಹಾಗಾಗಿ ಕುಸುಮಾ ಅವರಿಗೆ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ. ಅಂತಹ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಇದನ್ನು ಪ್ರಚಾರದ ಮೂಲಕ ಜನರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.
 

Follow Us:
Download App:
  • android
  • ios