ಬೆಂಗಳೂರು, (ನ.01): ಆರ್.ಆರ್. ನಗರದ ಉಪ ಚುನಾವಣೆಯಲ್ಲಿ ಗೆಲುವಿಗೆ ಹೊಸ ತಂತ್ರಗಾರಿಕೆ ರೂಪಿಸಿರುವ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಹಿಂದುತ್ವ ಕಾರ್ಡ್ ಪ್ಲೇ ಮಾಡಿದ್ದು, ಮತದಾರರ ಸೆಳೆಯಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಮಂದಿರ, ಮಸೀದಿಗಳಿಗೂ ಭೇಟಿ ನೀಡಿದ್ದಾರೆನ್ನಲಾಗಿದೆ.

ಹಿಂದೂ ಜಾಗೃತಿ ಸೇನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತನಾಡಿದ ಡಿ.ಕೆ. ಶಿವಕುಮಾರ್, ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಸಂಘಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಭಾಷಣ ಮುಗಿಸುತ್ತಾ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕ ಹಿಂದುತ್ವ ಕಾರ್ಡ್ ಬಳಕೆ ಮಾಡಿದ್ದಾರೆ.

ಮಾಜಿ ಶಾಸಕ ಶೀಘ್ರವೇ ಬಿಜೆಪಿಗೆ ಸೇರ್ಪಡೆ: ಹೊಸ ಬಾಂಬ್ ಸಿಡಿಸಿದ ಸಚಿವ ಜಾರಕಿಹೊಳಿ

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರ ರ್ಯಾಲಿಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಅವರು ಕಳೆದ ರಾತ್ರಿ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ವೇಳೆ ಕುಸುಮಾರನ್ನು ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಂತರ ಮೈಕ್ ಹಿಡಿದು ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳು ಸಹ ಧ್ವನಿ ಕೂಗಿಸಿದರು.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಹಿಂದೂ ಎಂದರೆ ಬಿಜೆಪಿ ಆಸ್ತಿನಾ? ನಾವೆಲ್ಲರೂ ಹಿಂದೂಗಳೆ, ಎಲ್ಲಾ ಜಾತಿ, ಧರ್ಮದವರು ಸಾಮರಸ್ಯದಿಂದ ಇರಬಾರದೇ ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಚುನಾವಣೆಯಲ್ಲಿ ಗೆಲುವಿಗೆ ಡಿ.ಕೆ. ಶಿವಕುಮಾರ್ ತಂತ್ರಗಾರಿಕೆಯಾಗಿದೆ.