ಬೆಂಗಳೂರು, (ಡಿ.25): ಬ್ರಿಟನ್‌ ಕೊರೋನಾ ವೈರಸ್ ಇದೀಗ ಎಲ್ಲೆಡೆ ಭೀತಿ ಹುಟ್ಟಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತರಾತುರಿಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ಬಳಿಕ ಕ್ಯಾನ್ಸಲ್ ಮಾಡಿ ನಗೆಪಾಟಲಿಗೀಡಾಗಿದೆ.

"

ಇನ್ನು ಈ ಅವಸರದ ನೈಟ್ ಕರ್ಫ್ಯೂ ತೀರ್ಮಾನ ಯಾರದ್ದು ಎನ್ನುವುದನ್ನಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಮಾರ್ ಹೇಳಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ನೈಟ್​ ಕರ್ಫ್ಯೂ ಕ್ಯಾನ್ಸಲ್: ಸಿಎಂ ಮಹತ್ವದ ಘೋಷಣೆ

ಇಂದು (ಶುಕ್ರವಾರ) ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ಸಿಎಂ ಯಡಿಯೂರಪ್ಪನವರು ಮಾಡಿದ್ದಲ್ಲ, ಸಚಿವ ಸುಧಾಕರ್ ಅವರದ್ದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಕಿಡಿಕಾರಿದರು.

ಪ್ರಪಂಚ ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರವನ್ನು ಗಮನಿಸುತ್ತಿದೆ. ಹಗಲಲ್ಲಿ ಸೋಂಕು ಬರಲ್ಲ, ರಾತ್ರಿ ವೇಳೆ ಸೋಂಕು ಬರುತ್ತದೆಯೇ? ಪರಿಜ್ಞಾನ ಇರುವವರು ಯಾರೂ ಇಂತಹ ನಿರ್ಧಾರಕ್ಕೆ ಬರುವುದಿಲ್ಲ. ರಾತ್ರಿ 11 ಗಂಟೆ ಮೇಲೆ ಯಾರು ಓಡಾಡುತ್ತಾರೆ ಎಂದು ಟೀಕಿಸಿದರು.

ಇಡೀ ವರ್ಷ ಜನ ನರಳಿದ್ದಾರೆ. ಇವರು ಯಾರ ಅಭಿಪ್ರಾಯವನ್ನೂ ಪಡೆಯದೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ಯಾಕೆ? ಇವರಿಗೆ ಯಾರಾದರೂ ತಜ್ಞರು ರಾತ್ರಿ ವೇಳೆ ಕರ್ಫ್ಯೂ ಮಾಡಿದರೆ ಸೋಂಕು ಬರುವುದಿಲ್ಲ ಎಂದು ಸಲಹೆ ನೀಡಿದ್ದಾರಾ? ಆ ರೀತಿ ಯಾರಾದರೂ ಕೊಟ್ಟಿದ್ದರೆ ಅವರ ಫೋಟೋ ಇದ್ದರೆ ಕೊಡಿ. ಅವರದು, ಇವರ ಫೋಟೋನಾ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಎಂದು ವ್ಯಂಗ್ಯವಾಡಿದರು.