ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಲವೆಡೆ ಕಾಂಗ್ರೆಸ್ ಅಧಿಕಾರಕ್ಕೇರಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರಕ್ರಿಯಿಸಿದ್ದಾರೆ.
ಬೆಂಗಳೂರು, (ಏ.30): ಕೊರೋನಾ ಎರಡನೇ ಅಲೆಯ ಬಿಕ್ಕಟ್ಟಿನ ನಡುವೆಯೇ ನಡೆದಿದ್ದ ನಗರ ಸಭೆ ಚುನಾವಣೆ ಫಲಿತಾಂಶ ಇಂದು (ಏ.30) ಹೊರ ಬಿದ್ದಿದೆ.
ಪಕ್ಷದ ಚಿಹ್ನೆಗಳ ಮೇಲೆ ನಡೆದ ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಯಲ್ಲಿ ಬಹುತೇಕ ಹಲವೆಡೆ ಕಾಂಗ್ರೆಸ್ ಅಧಿಕ್ಕಾರಕ್ಕೇರಿದ್ರೆ, ಆಡಳಿತರೂಢ ಬಿಜೆಪಿಗೆ ಮುಖಭಂಗವಾಗಿದೆ. ಈ ಚುನಾವಣೆಗಳ ಫಲಿತಾಂಶದಿಂದ ಕೈ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.
ಸ್ಥಳೀಯ ಸಂಸ್ಥೆ ಚುನಾವಣೆ: ಹಲವೆಡೆ ಅಧಿಕಾರಕ್ಕೇರಿದ ಕಾಂಗ್ರೆಸ್, ಮುದುಡಿದ ಕಮಲ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದುರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ . ಸ್ಥಳಿಯ ಸಂಸ್ಥೆಯ 10 ಸ್ಥಳೀಯ ಸಂಸ್ಥೆಗಳಲ್ಲಿ ಏಳು ಕಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ . ಮಡಿಕೇರಿಯಲ್ಲಿ ಮಾತ್ರ ನಾವು ಸೋತಿದ್ದೇವೆ . ಎರಡು ಜೆಡಿಎಸ್ ಗೆದ್ದಿದೆ , ಒಂದೆಡೆ ಬಿಜೆಪಿ ಗೆದ್ದಿದೆ . ಹೀಗಾಗಿ ಕಾಂಗ್ರೆಸ್ಗೆ ಬಹುಮತ ಬಂದಿದೆ ಎಂದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಾವು ಉತ್ತಮ ಸಾಧನೆ ಮಾಡಿದ್ದೆವು . ಈಗ ಸ್ಥಳೀಯ ಸಂಸ್ಥೆಯಲ್ಲಿ ನಾವು ಗೆದ್ದಿದ್ದೇವೆ . ಇದು ರಾಜ್ಯದ ಒಟ್ಟಾರೆ ಫಲಿತಾಂಶವಾಗಿದ್ದು , ರಾಜ್ಯದಲ್ಲಿ ಬದಲಾವಣೆಯಾಗಬೇಕು ಅಂತ ಜನ ಬಯಸಿದ್ದಾರೆ ಎಂದರು.
ಇದೇ ವೇಳೆ ಚುನಾವಣೆಯಲ್ಲಿ ದುಡಿದ ಎಲ್ಲ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಧನ್ಯವಾದ ತಿಳಿಸಿದರು .
