'ಯಡಿಯೂರಪ್ಪ ರಾಜೀನಾಮೆ ಹೇಳಿಕೆ ಮೇಲ್ನೋಟಕ್ಕೆ ನಾಟಕ'

* ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಮಾತು ಜೋರು
* ಸ್ವತಃ ಸಿಎಂ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಮಾತು
* ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ 
 

KPCC President Dk Shivakumar reacts On CM BSY resign Statement rbj

ಬೆಂಗಳೂರು, (ಜೂನ್.06): ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದೆ. ಇಂದು (ಭಾನುವಾರ) ಸ್ವತಃ ಸಿಎಂ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಕುರಿತು ಮಾತನಾಡಿರೋದು ಅಚ್ಚರಿ ಮೂಡಿಸಿದೆ. 

ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುಲಭವಲ್ಲ. ಸರ್ಕಾರ ಸಂಪೂರ್ಣ ವೈಫಲ್ಯ ಆಗಿದೆ.  ಮುಖ್ಯಮಂತ್ರಿಗಳು ಬಹಳ ಗಟ್ಟಿಯಾಗಿದ್ದಾರೆ. ಸಾಮಾನ್ಯವಾಗಿ ಅವರು ಅಧಿಕಾರ ಬಿಟ್ಟುಕೊಡಲ್ಲ. ಇದೆಲ್ಲ ಮೇಲ್ನೋಟಕ್ಕೆ ನಡೆಯುತ್ತಿರುವ ನಾಟಕ ಎಂದರು.

'ರಾಜೀನಾಮೆ ನೀಡಲು ಯಡಿಯೂರಪ್ಪಗೆ RSS ಮನವೊಲಿಸಿದೆ' 

 ಸಿಎಂ ಬದಲಾವಣೆಯದ್ದು ಏನೇನು ಕತೆ ನನಗೆ ಗೊತ್ತಿಲ್ಲ, ಯಡಿಯೂರಪ್ಪನವರ ಲೀಡರ್​​ಶಿಪ್​​​ನಲ್ಲಿ ಚುನಾವಣೆ ನಡೆದಿದೆ. ಮೊನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ 'ಯಡಿಯೂರಪ್ಪನವರೇ ಇನ್ನೆರಡು ವರ್ಷ ಸಿಎಂ' ಅಂತ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಅವರ ಪಕ್ಷದ ಆಂತರಿಕ ವಿಚಾರ ಎಂದು ಹೇಳಿದರು.

ಒಟ್ನಲ್ಲಿ ಅವರ ಪಕ್ಷದಲ್ಲಿ ಶಾಸಕರ ನಡುವೆಯೂ ಭಿನ್ನಾಭಿಪ್ರಾಯ, ಸಚಿವರ ನಡುವೆ ಭಿನ್ನಾಭಿಪ್ರಾಯ, ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ. ಹೀಗೆ ಎಲ್ಲರ ಭಿನ್ನಾಭಿಪ್ರಾಯದಿಂದ ಆಡಳಿತ ಕುಸಿದಿದೆ. ಯಡಿಯೂರಪ್ಪನವರ ನಾಯಕತ್ವ ಬದಲಾವಣೆ ಸುಲಭವಂತೂ ಅಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದ್ರು.

Latest Videos
Follow Us:
Download App:
  • android
  • ios