Asianet Suvarna News Asianet Suvarna News

RR ನಗರಕ್ಕೆ ಡಿ.ಕೆ. ರವಿ ಪತ್ನಿ ಹೆಸ್ರು: ಈ ಬಗ್ಗೆ ಡಿಕೆ ಶಿವಕುಮಾರ್ ಫಸ್ಟ್ ಪ್ರತಿಕ್ರಿಯೆ..!

ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಅವರ ಹೆಸರು ಕೇಳಿಬರುತ್ತಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ
 

KPCC President DK Shivakumar Reacts On DK Ravi Wife Kusuma For RR Nagar By Election rbj
Author
Bengaluru, First Published Oct 3, 2020, 4:30 PM IST

ಬೆಂಗಳೂರು, (ಅ.03):ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ. 

"

ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ಅವರ ತಂದೆ ನಮ್ಮ ಪಕ್ಷದಲ್ಲಿಯೇ ಇದ್ದರು. ಯಾವುದೋ ಕಾರಣಕ್ಕೋ ಬಿಟ್ಟು ಹೋಗಿದ್ದರು. ಪಾಪ ನೊಂದ ಆ ಹೆಣ್ಮಗಳಿಗೆ ಟಿಕೆಟ್ ಕೊಡಲು ಪರಿಗಣಿಸಿ ಎಂದು ಕೆಲವರು ಸಲಹೆ ನೀಡಿದ್ದಾರೆ. ಆದ್ರೆ, ಪಕ್ಷದಿಂದ ನಾವಿನ್ನೂ ಚರ್ಚಿಸಿಲ್ಲ. ಏಕೆಂದ್ರೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಏಳೆಂಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

RR ನಗರ ಉಪಕದನ: ಕುತೂಹಲ ಮೂಡಿಸಿದ ಡಿಕೆಶಿ-ಕುಸುಮಾ ಭೇಟಿ, ಯಾರಿಗೆ ಸಿಗಲಿದೆ ಕೈ ಟಿಕೆಟ್‌? 

ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚಿಸಲು ಹಿರಿಯರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು,  ಸಮಿತಿಯಿಂದ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ, ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ.  ಅಂತಿಮವಾಗಿ ಸಿದ್ದರಾಮಯ್ಯ ಸೇರಿ ಮುಖಂಡರೆಲ್ಲರೂ ಚರ್ಚಿಸಿ ಫೈನಲ್ ಮಾಡಲಿದ್ದೇವೆ ಎಂದು ಹೇಳಿದರು.

ಡಿ.ಕೆ. ರವಿ ಅವರ ಹೆಸರನ ಮೇಲೆ ಅನುಕಂಪದ ಅಲೆ ಸೃಷ್ಟಿಸಬಹುದು ಎನ್ನುವ ಪ್ಲಾನ್ ಕುಸುಮಾ ಹಾಗೂ ಕಾಂಗ್ರೆಸ್ ನಾಯಕರದ್ದಾಗಿದೆ.  ಆದ್ರೆ, ಡಿ.ಕೆ. ರವಿ ಅವರ ತಾಯಿ ಗೌರಮ್ಮ ಮುಳುವಾಗಿದ್ದಾರೆ. ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ಸ್ಪರ್ಧಿಸಿದರೆ ಸರಿ ಇರುವುದಿಲ್ಲ. ಅಲ್ಲದೇ ಬ್ಯಾನರ್‌ಗಳಲ್ಲಿ ನನ್ನ ಮಗನ ಫೋಟೋ ಹಾಕಿದ್ರೆ ಬೆಂಕಿ ಹಚ್ಚುತ್ತೇನೆ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸುಮಾ ಅವರ ಸ್ಪರ್ಧೆಗೆ ಕೊಂಚ ಹಿನ್ನಡೆಯಾದಂತಾಗಿದೆ. 
 
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.

Follow Us:
Download App:
  • android
  • ios