Asianet Suvarna News Asianet Suvarna News

ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆಶಿಗೆ ಶಾಕ್: ಸೋಲಿನ ಹೊಣೆ ಹೊತ್ತ ಕೆಪಿಸಿಸಿ ಸಾರಥಿ

ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದು, ಈ ಫಲಿತಾಂಶದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರತಿಕ್ರಿಯೆ ಹೀಗಿದೆ...

KPCC President DK Shivakumar Reacts On RR nagar and Sira By Election Result rbj
Author
Bengaluru, First Published Nov 10, 2020, 6:27 PM IST

ಬೆಂಗಳೂರು, (ನ.10): ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲ ಅಗ್ನಿ ಪರೀಕ್ಷೆಯಲ್ಲಿ ಸೋಲು ಕಂಡಿದ್ದಾರೆ. ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆ ಸೋಲು ಡಿಕೆ ಶಿವಕುಮಾರ್‌ಗೆ ಆರಂಭದಲ್ಲಿಯೇ ಆಘಾತ ನೀಡಿದೆ.

ಇನ್ನು ಉಪಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್,  ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ . ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಉಪಚುನಾವಣೆ ಸೋಲಿನ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಫಲಿತಾಂಶ ಹೇಗಾಯಿತು, ಯಾಕಾಯಿತು ಎಂಬುದನ್ನು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಿ ಏನೇನು ಸರಿ ಮಾಡಿಕೊಳ್ಳಬೇಕೋ ಅದನ್ನು ಮಾಡುತ್ತೇವೆ ಎಂದರು.

ಸ್ಪರ್ಧಿಸಿದ್ದ ಮೊದಲ ಚುನಾವಣೆಯಲ್ಲಿ ಸೋಲು ಕಂಡ ಕುಸುಮಾ ಮೊದಲ ಪ್ರತಿಕ್ರಿಯೆ...!

ಈ ಚುನಾವಣೆಯಲ್ಲಿ ಸೋತಿದ್ದೇವೆ ಎಂದು ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ.15ರಷ್ಟು ಅನುಕೂಲವಾಗುವ ಅನುಭವ ನಮಗಿದೆ. ನಾವೂ ಹಿಂದೆ ಬಳ್ಳಾರಿ, ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದರೂ ನಂತರ ಚುನಾವಣೆಯಲ್ಲಿ ಸೋತಿದ್ದೆವು. ಹೀಗಾಗಿ ಯಾರೂ ಬೇಸರವಾಗುವುದು ಬೇಡ ಅಂತಾ ಹೇಳಲು ಬಯಸುತ್ತೇನೆ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಈ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲಿರುವ ಕಾರ್ಯಕರ್ತರು ಹಾಗೂ ರಾಜ್ಯದ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರ ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು ಭಾವಿಸಿದ್ದೆ. ಭವಿಷ್ಯದ ಲೆಕ್ಕಾಚಾರದೊಂದಿಗೆ ನಾವು ನಮ್ಮ ಅಭ್ಯರ್ಥಿಯನ್ನು ಸೂಚಿಸಿದ್ದೆವು ಎಂದು ಹೇಳಿದರು.

 ಒಳ್ಳೆಯ ಅಭ್ಯರ್ಥಿಗೆ ಜನ ಕೂಡ ಸಹಕಾರ ನೀಡಿದ್ದಾರೆ. ಕುಸುಮಾ ಅವರು ಉತ್ತಮ ಹೋರಾಟ ಮಾಡಿದ್ದಾರೆ. ನಮಗೆ ಸಿಕ್ಕಿರುವ ಮತ ಕೇವಲ ನಮ್ಮ ಪಕ್ಷದ ಮತ ಮಾತ್ರ ಅಲ್ಲ. ಬೇರೆ ಪಕ್ಷದ ಮತದಾರರು ಮತ ಹಾಕಿದ್ದಾರೆ. ಅವರು ಕೊಟ್ಟ ತೀರ್ಪನ್ನು ನಾವು ಒಪ್ಪುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Follow Us:
Download App:
  • android
  • ios