ಬೆಂಗಳೂರು, (ಅ.12): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಖಾತೆಗಳ ಬದಲಾವಣೆಯಾಗಿದೆ. ಬಿ. ಶ್ರೀರಾಮುಲು ಅವರ ಬಳಿ ಇದ್ದ ಆರೋಗ್ಯ ಖಾತೆ ಡಾ. ಕೆ. ಸುಧಾಕರ್ ಅವರ ಪಾಲಾಗಿದೆ.

ಸೋಮವಾರ ಯಡಿಯೂರಪ್ಪ ಖಾತೆಗಳನ್ನು ಬದಲಾವಣೆ ಮಾಡಿದ್ದು, ಡಾ. ಕೆ. ಸುಧಾಕರ್‌ ಅವರಿಗೆ ಆರೋಗ್ಯ ಖಾತೆ ನೀಡಿದ್ದರೆ. ಬಿ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ಕೊಡಲಾಗಿದೆ. 

ಸಿಎಂ ಜತೆ 5 ನಿಮೀಷ ಚರ್ಚಿಸಿ ಖಾಸಗಿ ಕಾರನ್ನೇರಿದ ಶ್ರೀರಾಮುಲು, ತೀವ್ರ ಕುತೂಹಲ ಮೂಡಿಸಿದ ನಡೆ

ಸಮಾಜ ಕಲ್ಯಾಣ ಖಾತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬಳಿ ಇತ್ತು. ಲೋಕೋಪಯೋಗಿ ಖಾತೆ ಅವರ ಬಳಿಯೇ ಇದ್ದು, ಹಿಂದುಳಿದ ವರ್ಗಗಳ ಖಾತೆ ಮುಖ್ಯಮಂತ್ರಿಗಳ ಕೈ ಸೇರಿದೆ.

ಯಡಿಯೂರಪ್ಪ ಸಂಪುಟದಲ್ಲಿ ದಿಢೀರ್ ಖಾತೆಗಳ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಟ್ವೀಟ್ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಖಾತೆಗಳನ್ನು ಬದಲಾವಣೆ ಮಾಡಿದ್ದು ಏಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ವಿಫವಾಗಿದೆ. ಅದಕ್ಕಾಗಿಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಸರ್ಕಾರ ಪ್ರಾಣ ಹಾನಿ ತಡೆಯಲಿ ವಿಫಲವಾಗಿದೆ ಎಂಬ ನಮ್ಮ ಮಾತನ್ನು ಒಪ್ಪಿಕೊಂಡು ಆರೋಗ್ಯ ಸಚಿವರನ್ನು ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.