ಬೆಂಗಳೂರು, (ಡಿ.29): ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆ ವೈಯಕ್ತಿಕ ಕಾರಣವೋ ರಾಜಕಾರಣವೋ ಗೊತ್ತಿಲ್ಲ. ಆಗಬಾರದ್ದು ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಧರ್ಮೇಗೌಡ ಆತ್ಮಹತ್ಯೆ ನಂಬಲಿಕ್ಕೆ ಸಾಧ್ಯವಿಲ್ಲ. ಡೆತ್ ನೋಟ್‌ ಸಾರಾಂಶ ಏನು ಎಂಬುದು ಇನ್ನೂ ತಿಳಿದಿಲ್ಲ. ಬಹಳ ಸೂಕ್ಷ್ಮ ವ್ಯಕ್ತಿಯಾಗಿದ್ದ ಧರ್ಮೆಗೌಡ ಏತಕ್ಕಾಗಿ ಧೈರ್ಯ ಕಳೆದುಕೊಂಡು ಎಂಬುದನ್ನು ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ನೋವು ವ್ಯಕ್ತಪಡಿಸಿದರು. 

ಧರ್ಮೇಗೌಡ ಆತ್ಮಹತ್ಯೆ: ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಧರ್ಮೇಗೌಡರ ಸಾವು ಸಹಜವಾಗಿಯೇ ಕುಮಾರಸ್ವಾಮಿಗೆ ನೋವು ತಂದಿದೆ. ಜೆಡಿಎಸ್ ಪಕ್ಷಕ್ಕೆ ಆಘಾತವಾಗಿರುತ್ತದೆ. ಹೀಗಾಗಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದರು.

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದು, ಸಾವಿನಲ್ಲಿ ಯಾರೂ ರಾಜಕೀಯ‌ ಮಾಡಬಾರದು. ಧರ್ಮೇಗೌಡರು ಏಕೆ ಆತ್ಮಹತ್ಯೆಯಂತಹ ತೀರ್ಮಾನ ತೆಗೆದುಕೊಂಡರು ಎಂಬ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಜನರಿಗೆ ಸತ್ಯದ ಅರಿವಾಗಬೇಕು ಎಂದು ಒತ್ತಾಯಿಸಿದರು.