ಸಿದ್ದು ಕ್ಷೇತ್ರ ಬಾದಾಮಿಯಲ್ಲಿ ಡಿಕೆಶಿ ರಹಸ್ಯ ಸಂಚಾರ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಬಾದಾಮಿ ಮತಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಗೂಢ ಸಂಚಾರ ನಡೆಸಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾಗಲಕೋಟೆ (ನ.09): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ಬಾದಾಮಿ ಮತಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಿಗೂಢ ಸಂಚಾರ ನಡೆಸಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಸೋಮವಾರ ಬೆಳಗಾವಿಯಿಂದ ನೇರವಾಗಿ ಬಾದಾಮಿ ತಾಲೂಕಿನ ಕೆರೂರಿಗೆ ಬಂದಿದ್ದ ಡಿ.ಕೆ.ಶಿವಕುಮಾರ್ ಅವರು ಪಟ್ಟಣದಲ್ಲಿ ಬೀದಿಬದಿಯಲ್ಲಿ ಕೆಲ ಯುವಕರನ್ನು ಮಾತನಾಡಿಸಿ ಹೋಗಿದ್ದಾರೆ ಎಂಬ ಮಾತುಗಳು ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇಳಿಬಂದಿವೆ.
ಇದಕ್ಕೆ ಸಂಬಂಧಿಸಿದವು ಎನ್ನಲಾದ ಕೆಲ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಕೆಶಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿ ಯಾರಿಗೂ ಮಾಹಿತಿ ನೀಡದೇ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಡಿಕೆಶಿ ಭೇಟಿ ಕುರಿತು ಜಿಲ್ಲೆಯ ಪೊಲೀಸರಿಗೂ ಕೂಡ ಮಾಹಿತಿ ಇರಲಿಲ್ಲ ಎನ್ನಲಾಗಿದೆ. ಡಿಕೆಶಿ ಯಾವ ಕಾರಣಕ್ಕಾಗಿ ಬಾದಾಮಿ ಮತಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಯಾರನ್ನು ಭೇಟಿ ಮಾಡಲು ಬಂದಿದ್ದರು? ಈ ಕುರಿತು ಕಾಂಗ್ರೆಸ್ ಪಕ್ಷವಾಗಲಿ, ಖುದ್ದು ಡಿಕೆಶಿ ಆಗಲಿ ಗುಟ್ಟು ಬಿಟ್ಟುಕೊಟ್ಟಿಲ್ಲ ಏಕೆ? ಎಂಬ ಕುತೂಹಲ ಭರಿತ ಚರ್ಚೆಗಳು ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇಳಿಬಂದಿದ್ದು, ಡಿಕೆಶಿ ಕೆರೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿನತ್ತ ತೆರಳಿದರು ಎನ್ನಲಾಗಿದೆ.
ಕಾಂಗ್ರೆಸ್‌ನಲ್ಲಿದ್ದರೆ ಡಿಕೆಶಿ ಸಿಎಂ ಆಗುವುದು ಅನುಮಾನ: ಸಚಿವ ಮುನಿರತ್ನ
ಕಾಂಗ್ರೆಸ್ ಹಣ ಸಂಗ್ರಹಿಸಿದರೆ ಬಿಜೆಪಿಗೇಕೆ ನೋವು: ಬಿಜೆಪಿಯವರು ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸಂಗ್ರಹಿಸಿದ್ದಾರೆ. ನಮಗೆ ಯಾರೂ ಬಾಂಡ್ ಕೊಡುವವರಿಲ್ಲ. ಆದ್ದರಿಂದ ನಾವು ವಿಧಾನಸಭಾ ಚುನಾವಣಾ ಟಿಕೆಟ್ ನೀಡಲು ಕಾರ್ಯಕರ್ತರಿಂದ ಹಣ ಸಂಗ್ರಹಿಸುತ್ತಿದ್ದೇವೆ. ಇದರಿಂದ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯವರು ಏನಾದರೂ ಟೀಕಿಸಲಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ರು. ಹಾಗೂ ಅರ್ಜಿ ಸಲ್ಲಿಸುವಾಗ 1 ಲಕ್ಷ, 2 ಲಕ್ಷ ರು. ಡಿಡಿ ಪಡೆದರೆ ತಪ್ಪೇನು?’ ಎಂದು ಪ್ರಶ್ನಿಸಿದರು.
‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜಿಪಿ ಸರ್ಕಾರವಿದ್ದು ಬಾಂಡ್ ಹೆಸರಿನಲ್ಲಿ ಹಣ ಸಂಗ್ರಹ ಮಾಡುತ್ತಿದ್ದಾರೆ.
ಖಾತೆ ಬಂದ್ ಮಾಡಿಸಿದ್ರೂ, ಜೈಲಿಗೆ ಹಾಕಿಸಿದ್ರೂ ನಾವು ಸಿದ್ಧ: ಡಿಕೆಶಿ
ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷ ಸಂಘಟನೆಗೆ ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು? ‘ಹಣ ನೀಡುವ ಬಗ್ಗೆ ಪಕ್ಷದ ಯಾವ ಕಾರ್ಯಕರ್ತರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ. ಪಕ್ಷ ತೊರೆಯಬಹುದು. ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಪಕ್ಷದಿಂದಲೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರವಾಗಿದ್ದು, ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು. ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ತಿರುಗೇಟು ನೀಡಿದರು.