ಬೆಂಗಳೂರು(ಸೆ.20): ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿ ಸೋಂಕಿಗೆ ಬಲಿಯಾದವರ ಸಂಖ್ಯೆ 7,800ಕ್ಕೂ ಹೆಚ್ಚಾಗಿದೆ. ಹೀಗಿದ್ದರೂ ಸರ್ಕಾರ ಕೊರೋನಾ ಬಗ್ಗೆ ನಿರ್ಲಕ್ಷ್ಯವಹಿಸುವ ಮೂಲಕ ಮುಗ್ಧ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ತಾರಕಕ್ಕೇರಿರುವ ಹೊತ್ತಿನಲ್ಲಿ ಸಿನಿಮಾ, ಈಜುಕೊಳ, ಶಾಲಾ-ಕಾಲೇಜು ಹೊರತುಪಡಿಸಿ ಉಳಿದೆಲ್ಲವನ್ನೂ ಯಾವುದೇ ನಿಯಂತ್ರಣವಿಲ್ಲದೆ ಮುಕ್ತವಾಗಿ ನಡೆಯಲು ಅವಕಾಶ ನೀಡಲಾಗಿದೆ. ಜನ ಸೂಕ್ತ ಚಿಕಿತ್ಸೆ ಇಲ್ಲದೆ ಸಾಯುತ್ತಿದ್ದರೆ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಕಸರತ್ತು ನಡೆಸುತ್ತಿದ್ದಾರೆ ಎಂಟು ಟೀಕಿಸಿದ್ದಾರೆ.

"

ಯಡಿಯೂರಪ್ಪ ನಿರೀಕ್ಷೆ ಠುಸ್: ಬರಿಗೈಲಿ ದೆಹಲಿಯಿಂದ ವಾಪಸ್..!

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶುಕ್ರವಾರ ಒಂದೇ ದಿನ ದಾಖಲೆಯ 179 ಮಂದಿ ಬಲಿಯಾಗಿದ್ದಾರೆ. ವಾಟ್ಸಪ್‌, ಫೇಸ್‌ಬುಕ್‌ ತುಂಬಾ ಬರೀ ಸಾವಿನ ಸುದ್ದಿಗಳೇ ಹರಿದಾಡುತ್ತಿವೆ. ಈ ಹಂತದಲ್ಲಿ ಶಾಲಾ-ಕಾಲೇಜುಗಳು ತೆರೆಯುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿರುವುದು ಆತಂಕಕಾರಿ ವಿಚಾರ. ಸರ್ಕಾರಗಳು ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬಾರದು ಎಂದು ತರಾಟೆಗೆ ತೆಗೆದುಕೊಂಡರು.